ಅಮೆರಿಕಾದಲ್ಲಿ ಕೊರೋನಾ ಆರ್ಭಟ: ಒಂದೇ ದಿನ 1,127 ಮಂದಿ ಬಲಿ, ಸೋಂಕಿತರ ಸಂಖ್ಯೆ 16 ಲಕ್ಷಕ್ಕೆ ಏರಿಕೆ

ಅಮೆರಿಕಾದಲ್ಲಿ ಕೊರೋನಾ ಆರ್ಭಟ ಎಂದಿನಂತೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,127 ಮಂದಿ ಬಲಿಯಾಗಿದ್ದಾರೆ. ಅಲ್ಲದೆ ಒಟ್ಟಾರೆ ಸಾವಿನ ಸಂಖ್ಯೆ 1 ಲಕ್ಷಕ್ಕೆ ತಲುಪುತ್ತಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾಷಿಂಗ್ಟನ್: ಅಮೆರಿಕಾದಲ್ಲಿ ಕೊರೋನಾ ಆರ್ಭಟ ಎಂದಿನಂತೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,127 ಮಂದಿ ಬಲಿಯಾಗಿದ್ದಾರೆ. ಅಲ್ಲದೆ ಒಟ್ಟಾರೆ ಸಾವಿನ ಸಂಖ್ಯೆ 1 ಲಕ್ಷಕ್ಕೆ ತಲುಪುತ್ತಿದೆ. 

ಈ ವರೆಗೂ ಅಮೆರಿಕಾದಲ್ಲಿ ಹೆಮ್ಮಾರಿ ವೈರಸ್'ನಿಂದಾಗಿ 98 ಸಾವಿರ ಮಂದಿ ಸಾವನ್ನಪ್ಪಿದ್ದು, ಈ ಸಂಖ್ಯೆ ಭಾನುವಾರ 1 ಲಕ್ಷಕ್ಕೆ ತಲುಪುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಅಮೆರಿಕಾದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಈ ವರೆಗೂ 1,621,658 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com