ಅಭಿನಂದನ್ ಬಗ್ಗೆ ಹೇಳಿಕೆ: ಪಿಎಂಲ್-ಎನ್ ಮುಖಂಡನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಪಾಕ್ ಸರ್ಕಾರ ಚಿಂತನೆ

ಸೆರೆಹಿಡಿಯಲಾಗಿದ್ದ  ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ಥಮಾನ್ ಅವರನ್ನು ಒತ್ತಡಕ್ಕೆ ಒಳಗಾಗಿ ಭಾರತಕ್ಕೆ ಹಸ್ತಾಂತರಿಸಲಾಯಿತು ಎಂಬ ವಿವಾದಾತ್ಮಕ ಹೇಳಿಕೆಗಾಗಿ ಪ್ರತಿಪಕ್ಷದ ಹಿರಿಯ ಮುಖಂಡನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವ ಬಗ್ಗೆ ಪಾಕಿಸ್ತಾನ ಸರ್ಕಾರ  ಚಿಂತಿಸುತ್ತಿದೆ ಎಂದು ಹಿರಿಯ ಸಚಿವರೊಬ್ಬರು ಹೇಳಿದ್ದಾರೆ.
ವಿಂಗ್ ಕಮಾಂಡರ್ ಅಭಿನಂದನ್  ವರ್ತಮಾನ್
ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್

ಲಾಹೋರ್:  ಸೆರೆಹಿಡಿಯಲಾಗಿದ್ದ  ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ಥಮಾನ್ ಅವರನ್ನು ಒತ್ತಡಕ್ಕೆ ಒಳಗಾಗಿ ಭಾರತಕ್ಕೆ ಹಸ್ತಾಂತರಿಸಲಾಯಿತು ಎಂಬ ವಿವಾದಾತ್ಮಕ ಹೇಳಿಕೆಗಾಗಿ ಪ್ರತಿಪಕ್ಷದ ಹಿರಿಯ ಮುಖಂಡನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವ ಬಗ್ಗೆ ಪಾಕಿಸ್ತಾನ ಸರ್ಕಾರ  ಚಿಂತಿಸುತ್ತಿದೆ ಎಂದು ಹಿರಿಯ ಸಚಿವರೊಬ್ಬರು ಹೇಳಿದ್ದಾರೆ.

ಪಾಕ್ ಸೇನಾ ಮುಖ್ಯಸ್ಥ ಜನರಲ್ ಜಾವೇದ್ ಬಜ್ವಾ ಸೇರಿದಂತೆ ಹಿರಿಯ ಮುಖಂಡರನ್ನೊಳಗೊಂಡ ಸಭೆಯಲ್ಲಿ ಕಾಲುಗಳು ನಡುಗುತ್ತಿದ್ದವು. ಹಣೆಯಲ್ಲಿ ಬೆವರು ಕೀಳುತಿತ್ತು. ಒಂದು ವೇಳೆ ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದರೆ ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಲಿದೆ ಎಂದು ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಮನವಿ ಮಾಡಿದ್ದರು ಎಂದು ಪಾಕಿಸ್ತಾನ ಮುಸ್ಲೀಂ ಲೀಗ್ ಮುಖಂಡ ಸರ್ದಾರ್ ಅಯಾಜ್ ಸಾದಿಕ್ ಬುಧವಾರ ಹೇಳಿಕೆ ನೀಡಿದ್ದರು.

ಸಾದಿಕ್ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಒಳಾಡಳಿತ ಸಚಿವ ಇಜಾಜ್ ಶಾ, ಸಾದಿಕ್ ವಿರುದ್ಧ ಸಾಕಷ್ಟು ದೂರುಗಳಿದ್ದು, ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಸರ್ಕಾರ ಆಲೋಚಿಸಿರುವುದಾಗಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com