ಹಿಂದೂಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪಾಕ್ ಸಚಿವನ ವಜಾಗೊಳಿಸಿದ ಇಮ್ರಾನ್ ಖಾನ್

ಅಲ್ಪಸಂಖ್ಯಾತ ಹಿಂದೂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗೆ ಹೆಸರುವಾಸಿಯಾದ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮಾಹಿತಿ ಸಚಿವ ಫಯಾಜುಲ್ ಚೋಹನ್ ಅವರನ್ನು ಪ್ರಧಾನಿ ಇಮ್ರಾನ್ ಖಾನ್ ಅವರು ಮತ್ತೆ ವಜಾಗೊಳಿಸಿದ್ದಾರೆ.
ಇಮ್ರಾನ್ ಖಾನ್
ಇಮ್ರಾನ್ ಖಾನ್

ಲಾಹೋರ್: ಅಲ್ಪಸಂಖ್ಯಾತ ಹಿಂದೂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗೆ ಹೆಸರುವಾಸಿಯಾದ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮಾಹಿತಿ ಸಚಿವ ಫಯಾಜುಲ್ ಚೋಹನ್ ಅವರನ್ನು ಪ್ರಧಾನಿ ಇಮ್ರಾನ್ ಖಾನ್ ಅವರು ಮತ್ತೆ ವಜಾಗೊಳಿಸಿದ್ದಾರೆ.

ಇಮ್ರಾನ್ ಖಾನ್ ಅವರು ಪ್ರತಿಪಕ್ಷಗಳನ್ನು ಎದುರಿಸಲು ಪ್ರಾಂತೀಯ ಮಾಧ್ಯಮ ತಂಡದ ಅಸಮರ್ಥತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಂತರ ಅವರನ್ನು ಮತ್ತೆ ವಜಾ ಮಾಡಲಾಗಿದೆ.

ಚೋಹನ್ ಹಿಂದೂ ವಿರೋಧಿ ಹೇಳಿಕೆಗಳಿಗೆ ಸಾಮಾಜಿ ಮಾಧ್ಯಮದಲ್ಲಿ ತೀವ್ರ ಟೀಕೆ ಗುರಿಯಾಗಿದ್ದನ್ನು ಗಮನಿಸಿದ ಪ್ರಧಾನಿ ಇಮ್ರಾನ್ ಖಾನ್ ಅವರು ಅವರನ್ನು ವಜಾಗೊಳಿಸುವಂತೆ ಆದೇಶಿಸಿದ್ದಾರೆ.

ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ)ನ ಫೈರ್‌ಬ್ರಾಂಡ್ ನಾಯಕ ಚೋಹನ್ ಅವರನ್ನು 2019ರ ಫೆಬ್ರವರಿಯಲ್ಲಿ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಕ್ಕಾಗಿ ಸಚಿವ ಸ್ಥಾನದಿಂದ ವಜಾಗೊಳಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com