ಅಮೆರಿಕಾ ಅಧ್ಯಕ್ಷೀಯ ಚುನಾವಣೆ: ಗೆಲುವಿನ ಸನಿಹದಲ್ಲಿ ಜೋ ಬೈಡನ್ 

 ಜಗತ್ತಿನಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ  ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಗೆಲುವಿನ ಸನಿಹದಲ್ಲಿದ್ದಾರೆ.
ಜೋ ಬೈಡನ್
ಜೋ ಬೈಡನ್

ವಾಷಿಂಗ್ಟನ್: ಜಗತ್ತಿನಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ  ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಗೆಲುವಿನ ಸನಿಹದಲ್ಲಿದ್ದಾರೆ. ಶ್ವೇತಭವನ ಗೆಲಲ್ಲು 270 ಎಲೆಕ್ಟೊರಲ್ ಕಾಲೇಜ್ ಮತಗಳ ಅಗತ್ಯವಿದ್ದು, ಜೋ ಬೈಡನ್ ಮ್ಯಾಜಿಕ್ ನಂಬರ್  ಸಮೀಪದಲ್ಲಿದ್ದಾರೆ.

ವಿಸ್ಕಾನ್ಸಿನ್ ಮತ್ತು ಮಿಚಿಗನ್ ನಲ್ಲಿ ಜೋ ಬೈಡನ್ ಗೆಲುವು ಪಡೆದಿದ್ದು, ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾದಿ ಕಠಿಣವಾಗಿದೆ. ಇನ್ನೂ ಕೆಲವು ರಾಜ್ಯಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಡೊನಾಲ್ಡ್ ಟ್ರಂಪ್ ವಂಚನೆ ನಡೆದಿದೆ ಎಂದು ಆರೋಪಿಸಿ  ನ್ಯಾಯಾಲಯದಲ್ಲಿ ಕೇಸ್ ದಾಖಲಿಸಲು ಪ್ರಯತ್ನ ನಡೆಸಿದ್ದಾರೆ. ಆದರೆ, ನ್ಯಾಯಾಲಯದ ಕ್ರಮ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರದಂತೆ ತೋರುತ್ತಿದೆ.

ಡೊನಾಲ್ಡ್ ಟ್ರಂಪ್ ನೀಡಿರುವ ವಂಚನೆ ಆರೋಪ ನಿರಾಧಾರವಾಗಿದೆ ಎಂದು ಅಂತಾರಾಷ್ಟ್ರೀಯ ವೀಕ್ಷಕರು ಹೇಳಿದ್ದಾರೆ. ಇಂತಹ ಹೇಳಿಕೆಗಳು ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ಸಾರ್ವಜನಿಕರ ನಂಬಿಕೆಯನ್ನು ಹಾಳು ಮಾಡಲಿವೆ ಎಂದು ಪ್ರತಿಪಾದಿಸಿದ್ದಾರೆ. 

ತಡವಾದ ಕಾನೂನು ಸವಾಲುಗಳು ಮತ್ತು ಚುನಾವಣಾ ವಂಚನೆಯ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆಯಿಂದ ಉಂಟಾದ ಅನಿಶ್ಚಿತತೆಯು ಚುನಾವಣಾ ಅಧಿಕಾರಿಗಳು ಮತ್ತು ಮತದಾರರಲ್ಲಿ ಗೊಂದಲ ಮತ್ತು ಕಳವಳವನ್ನು ಉಂಟುಮಾಡಿದೆ ಎಂದು ವರದಿ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com