ಅಧ್ಯಕ್ಷೀಯ ಚುನಾವಣೆ ಸೋಲು ಒಪ್ಪಿಕೊಳ್ಳದ ಟ್ರಂಪ್, ಕಾನೂನು ಸಮರಕ್ಕೆ ಸಜ್ಜು!

ಅಮೆರಿಕಾ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಜೋ ಬೈಡನ್ ಆಯ್ಕೆಯಾಗುವುದು ಖಚಿತವಾಗುತ್ತಿದ್ದಂತೆ ಪರಾಜಿತ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಸೋಲು ಒಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದು ಕಾನೂನು ಸಮರಕ್ಕೆ ಸಜ್ಜಾಗುತ್ತಿದ್ದಾರೆ.
ಡೊನಾಲ್ಡ್ ಟ್ರಂಪ್
ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಅಮೆರಿಕಾ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಜೋ ಬೈಡನ್ ಆಯ್ಕೆಯಾಗುವುದು ಖಚಿತವಾಗುತ್ತಿದ್ದಂತೆ ಪರಾಜಿತ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಸೋಲು ಒಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದು ಕಾನೂನು ಸಮರಕ್ಕೆ ಸಜ್ಜಾಗುತ್ತಿದ್ದಾರೆ. 

ಚುನಾವಣೆ ಪ್ರಕ್ರಿಯೆಯಲ್ಲಿ ಸೂಕ್ತ ರೀತಿಯಲ್ಲಿ ನಡೆಯಬೇಕು ಹಾಗೂ ಅರ್ಹ ವ್ಯಕ್ತಿ ಗೆಲುವು ಸಾಧಿಸಬೇಕು ಎಂದು ಟ್ರಂಪ್ ಹೇಳಿದ್ದಾರೆ. 

ಪೆನ್ಸಿಲ್ವೇನಿಯಾದಲ್ಲಿ ಜೋ ಬಿಡೆನ್ ಜಯಶಾಲಿಯಾಗುತ್ತಿದ್ದಂತೆ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಖಚಿತವಾಯಿತು. ಆದರೆ ಡೊನಾಲ್ಡ್ ಟ್ರಂಪ್ ರಾಜ್ಯಗಳ ಮತ ಎಣಿಕೆಯಲ್ಲಿ ಅಕ್ರಮ ನಡೆದಿದ್ದು ಅದನ್ನು ಸರಿಪಡಿಸಲು ಕಾನೂನು ಸಮರ ನಡೆಯುವುದಾಗಿ ಹೇಳಿದ್ದಾರೆ. 

ತೀವ್ರ ಕುತೂಹಲ ಕೆರಳಿಸಿದ್ದ ಮತ ಎಣಿಕೆಯಲ್ಲಿ ಅಧ್ಯಕ್ಷ ಸ್ಥಾನಕ್ಕೇರಲು 270 ಮ್ಯಾಜಿಕ್ ನಂಬರ್ ಬೇಕಿತ್ತು. ಆದರೆ ಜೋ ಬೈಡನ್ 284 ಮತ ಪಡೆದಿದ್ದಾರೆ. ಡೊನಾಲ್ಡ್ ಟ್ರಂಪ್ 214 ಮತ ಪಡೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com