ಅಮೆರಿಕ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಗೆ ಇನ್ನೂ ಶುಭಾಶಯ ಕೋರದ ಚೀನಾ

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ ಬಹುತೇಕ ಎಲ್ಲಾ ರಾಷ್ಟ್ರಗಳು ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಅವರಿಗೆ ಶುಭಾಶಯ ಕೋರಿವೆ. ಆದರೆ ಚೀನಾ ಮಾತ್ರ ವಿಶ್ವದ ದೊಡ್ಡಣ್ಣ ಅಮೆರಿಕದ ನೂತನ ಅಧ್ಯಕ್ಷರಿಗೆ ಇನ್ನೂ ಶುಭಾಶಯ ಸಂದೇಶ ರವಾನಿಸಿಲ್ಲ.
ಚೀನಾ ದಿನಪತ್ರಿಕೆಗಳು
ಚೀನಾ ದಿನಪತ್ರಿಕೆಗಳು

ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ ಬಹುತೇಕ ಎಲ್ಲಾ ರಾಷ್ಟ್ರಗಳು ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಅವರಿಗೆ ಶುಭಾಶಯ ಕೋರಿವೆ. ಆದರೆ ಚೀನಾ ಮಾತ್ರ ವಿಶ್ವದ ದೊಡ್ಡಣ್ಣ ಅಮೆರಿಕದ ನೂತನ ಅಧ್ಯಕ್ಷರಿಗೆ ಇನ್ನೂ ಶುಭಾಶಯ ಸಂದೇಶ ರವಾನಿಸಿಲ್ಲ.

ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬಿಡೈನ್ ಜಯಗಳಿಸಿದ್ದಾರೆ ಎಂಬುದನ್ನು ಗಮನಿಸಿದ್ದೇವೆ. ಆದರೆ ಅಂತಿಮ ಫಲಿತಾಂಶ ಇನ್ನೂ ಬರದ ಕಾರಣ ಚೀನಾ ತನ್ನ ಅಧಿಕೃತ ಶುಭಾಶಯವನ್ನು ತಿಳಿಸಲು ಸಾಧ್ಯವಿಲ್ಲ ಎಂದು ಚಿನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್‌ಬಿನ್ ಹೇಳಿದ್ದಾರೆ.

ಚೀನಾ ಮಾತ್ರವಲ್ಲದೇ ರಷ್ಯಾ ಹಾಗೂ ಮೆಕ್ಸಿಕೋ ದೇಶಗಳು ಸಹ ಜೋ ಬೈಡನ್ ಅವರಿಗೆ ಅಧಿಕೃತ ಅಭಿನಂದನೆ ಸಲ್ಲಿಸಿಲ್ಲ ಎಂಬುದು ಇಲ್ಲಿ ಗಮನಾರ್ಹ.

ಅಮೆರಿಕದ 46ನೇ ಅಧ್ಯಕ್ಷರಾಗಿ ಡೆಮಾಕ್ರೆಟಿಕ್ ಪಕ್ಷದ ಜೋ ಬೈಡನ್ ಆಯ್ಕೆಯಾಗಿದ್ದಾರೆ. ತೀವ್ರ ಹಣಾಹಣಿಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರಿಗೆ ಸೋಲುಣಿಸಿರುವ ಜೋ ಬೈಡನ್, ಅಮೆರಿಕದ ಇತಿಹಾಸದಲ್ಲೇ ಅತೀ ಹೆಚ್ಚು ಮತಗಳನ್ನು ಪಡೆದು ಅಧ್ಯಕ್ಷರಾಗುತ್ತಿರುವ ಮೊದಲ ವ್ಯಕ್ತಿ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com