ಪುಲ್ವಾಮಾ ಮಾತ್ರವಲ್ಲ ಮುಂಬೈ ದಾಳಿಯನ್ನೂ ಮಾಡಿಸಿದ್ದು ನಾನೇ, 11 ಲಷ್ಕರ್ ಉಗ್ರರು ನಮ್ಮವರು ಎಂದ ಪಾಕಿಸ್ತಾನ!

ಪಾಕಿಸ್ತಾನದ ಉನ್ನತ ತನಿಖಾ ಸಂಸ್ಥೆ  ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ (ಎಫ್ಐಎ) 26/11 ಮುಂಬೈ ದಾಳಿಯಲ್ಲಿ ತನ್ನ ದೇಶದ ಹನ್ನೊಂದುಭಯೋತ್ಪಾದಕರ ಉಪಸ್ಥಿತಿಯನ್ನು ಒಪ್ಪಿಕೊಂಡಿದೆ. 
ಮುಂಬೈ ದಾಳಿ
ಮುಂಬೈ ದಾಳಿ

ಇಸ್ಲಾಮಾಬಾದ್: ಪಾಕಿಸ್ತಾನದ ಉನ್ನತ ತನಿಖಾ ಸಂಸ್ಥೆ  ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ (ಎಫ್ಐಎ) 26/11 ಮುಂಬೈ ದಾಳಿಯಲ್ಲಿ ತನ್ನ ದೇಶದ ಹನ್ನೊಂದುಭಯೋತ್ಪಾದಕರ ಉಪಸ್ಥಿತಿಯನ್ನು ಒಪ್ಪಿಕೊಂಡಿದೆ.

2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿಅಲ್ ಫೌಜ್ ದೋಣಿ ಖರೀದಿಯಲ್ಲಿ ಭಾಗಿಯಾಗಿದ್ದ ಮುಲ್ತಾನ್‌ನ ಮುಹಮ್ಮದ್ ಅಮ್ಜದ್ ಖಾನ್ ಅವರನ್ನು 880 ಪುಟಗಳ ಉದ್ದದ ಪಟ್ಟಿಯಲ್ಲಿ ಹೆಸರಿಸಲಾಗಿದೆ. ಅಮ್ಜದ್ ಖಾನ್ಯಮಹಾ ಮೋಟೋ ಆರ್ ಬೋಟ್ ಎಂಜಿನ್, ಲೈಫ್ ಜಾಕೆಟ್ ಗಳು, ಕರಾಚಿಯ ಎಆರ್ ಝಡ್  ವಾಟರ್ ಸ್ಪೋರ್ಟ್ ನಿಂದ ಗಾಳಿ ತುಂಬಬಹುದಾದ ದೋಣಿಗಳನ್ನು ಖರೀದಿಸಿದ, ನಂತರ ಇದನ್ನು ಭಾರತದ ವಾಣಿಜ್ಯ ನಗರಿಯ ಮೇಲಿನ ದಾಳಿಯಲ್ಲಿ ಬಳಸಲಾಯಿತು. ಅಲ್-ಹುಸೇನಿ ದೋಣಿಯ ಕ್ಯಾಪ್ಟನ್ ಆಗಿದ್ದ ಎಂದು ಸಹ ಉಲ್ಲೇಖಿಸಲಾಗಿದೆ.

ಒಟ್ಟಾರೆ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಬಳಸಿದ ದೋಣಿಗಳ ಒಂಬತ್ತು ಸಿಬ್ಬಂದಿಗಳನ್ನೂ ಈ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಪಟ್ಟಿಯಲ್ಲಿ ದೇಶದ 1210 ಕುಖ್ಯಾತ ಹಾಗೂ ಮೋಸ್ಟ್ ವಾಂಟೆಡ್ ಭಯೋತ್ಪಾದಕರನ್ನು ಉಲ್ಲೇಖಿಸಲಾಗಿದೆ ಆದರೆ ಹಫೀಜ್ ಸಯೀದ್, ಮಸೂದ್ ಅಜರ್, ಅಥವಾ ದಾವೂದ್ ಇಬ್ರಾಹಿಂ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

ಹಫೀಜ್ ಸಯೀದ್ ಯುಎನ್ ಪಟ್ಟಿಮಾಡಿದ ಅಂತರರಾಷ್ಟ್ರೀಯ ಭಯೋತ್ಪಾದಕ, 26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್, ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ಕಳೆದ ವರ್ಷ 40 ಕ್ಕೂ ಹೆಚ್ಚು ಭಾರತೀಯ ಅರೆಸೈನಿಕ ಪಡೆಗಳನ್ನು ಕೊಂದ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಪಟ್ಟಿ ಮಾಡಲಾಗಿತ್ತು. . ಈ ವರ್ಷದ ಆರಂಭದಲ್ಲಿ, ಪಾಕಿಸ್ತಾನದ ನ್ಯಾಯಾಲಯವು ಉಗ್ರವಾದಕ್ಕೆ ಹಣ ಹೂಡಿಕೆ ಮಾಡಿದ್ದಕ್ಕಾಗಿ ಗೆ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು.

ಇನ್ನು ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿದ್ದಾನೆಂದು ಆ ದೇಶ ಎಂದೂ ಒಇಇಕೊಂಡಿಲ್ಲವಾಗಿಯೂ ಅವನು ಕರಾಚಿಯಲ್ಲಿಯೇ ಇರುವುದು ಎಲ್ಲರಿಗೂ ತಿಳಿದಿರುವ ವಿಚಾರ. ವಾಸ್ತವವಾಗಿ ಆತ ಯುಎನ್ ಪಟ್ಟಿಮಾಡಿದ ಭಯೋತ್ಪಾದಕರಾಗಿದ್ದಾನೆ.  ಅವನ ವಿಳಾಸವನ್ನು ದಕ್ಷಿಣ ಸಿಂಧ್ ಪ್ರಾಂತ್ಯದ ಪ್ರಾಂತೀಯ ರಾಜಧಾನಿ ಕರಾಚಿ ಎಂದು ಉಲ್ಲೇಖಿಸಲಾಗಿದೆ.

ಇತ್ತೀಚೆಗೆ ನಲವತ್ತು ಯೋಧರು ಹುತಾತ್ಮರಾಗಲು ಕಾರಣವಾಗಿದ್ದ ಪುಲ್ವಾಮಾ ದಾಳಿಯ ರೂವಾರಿ ತಾನೆಂದು ಪಾಕಿಸ್ತಾನ ಬಹಿರಂಗವಾಗಿ ಒಪ್ಪಿಕೊಂಡಿತ್ತು. ಪಾಕ್ ಸಚಿವರು ಸಂಸತ್ತಿನಲ್ಲೇ ಪುಲ್ವಾಮಾ ದಾಳಿಯನ್ನು ಇಮ್ರಾನ್ ಕಾನ್ ಸರ್ಕಾರದ ಮಹತ್ವದ ಸಾಧನೆ ಎಂದು ಹೇಳಿ ಹೊಗಳಿದ್ದರು. ಇದೀಗ ಮುಂಬೈ ದಾಳಿಯ ಹಿಂದೆ ಸಹ ತನ್ನ ಕೈವಾಡವಿದೆ ಎಂದು ನೆರೆರಾಷ್ಟ್ರ ಖಚಿತಪಡಿಸಿರುವುದು ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ನಿಜಬಣ್ಣವನ್ನು ಮತ್ತೆ ಬಯಲು ಮಾಡಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com