ಅಮೆರಿಕಾದಲ್ಲಿ ಭುಗಿಲೆದ್ದ ಹಿಂಸಾಚಾರ: ವಾಷಿಂಗ್ಟನ್ ಡಿಸಿಯಲ್ಲಿ ಟ್ರಂಪ್-ಜೋ ಬೈಡನ್ ಬೆಂಬಲಿಗರ ನಡುವೆ ಜಟಾಜಟಿ!

ಅಮೆರಿಕಾದ ಅಧ್ಯಕ್ಷೀಯ ಹಾಗೂ ಉಪಾಧ್ಯಕ್ಷೀಯ ಚುನಾವಣೆ ಫಲಿತಾಂಘ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಹಿಂಸಾಚಾರ ಸೃಷ್ಟಿಗೊಂಡಿರುವ ಸ್ಥಳದಲ್ಲಿ ಪೊಲೀಸರು
ಹಿಂಸಾಚಾರ ಸೃಷ್ಟಿಗೊಂಡಿರುವ ಸ್ಥಳದಲ್ಲಿ ಪೊಲೀಸರು

ವಾಷಿಂಗ್ಟನ್: ಅಮೆರಿಕಾದ ಅಧ್ಯಕ್ಷೀಯ ಹಾಗೂ ಉಪಾಧ್ಯಕ್ಷೀಯ ಚುನಾವಣೆ ಫಲಿತಾಂಘ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. 

ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿ ಟ್ರಂಪ್ ಪರ ಲಕ್ಷಾಂತರ ಬೆಂಬಲಿಗರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಡೆಮಾಕ್ರೆಟಿಕ್ ಪಕ್ಷದ ಜೋ ಬೈಡನ್ ಬೆಂಬಲಿಗರೂ ಕೂಡ ಸ್ಥಳಕ್ಕೆ ಬಂದಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಜಟಾಪಟಿ ನಡೆದಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಬ್ಲ್ಯಾಕ್ ಲೈವ್ಸ್ ಮ್ಯಾಟರ್(ಬಿಎಲ್‌ಎಂ) ಹಾಗೂ ಟ್ರಂಪ್ ಅವರನ್ನು ಬೆಂಬಲಿಸುವ ಪ್ರೌಡ್ ಬಾಯ್ಸ್ ಗ್ರೂಪ್ ನಡುವೆ ಜಟಾಪಟಿ ನಡೆದಿದೆ ಎಂದು ವರದಿಗಳು ತಿಳಿಸಿವೆ. 

ಘಟನೆ ವೇಳೆ ಟ್ರಂಪ್ ಹಾಗೂ ಬೈಡನ್ ಬೆಂಬಲಿಗರು ಗಂಭೀರವಾಗಿ ಗಾಯಗೊಂಡಿದ್ದು, ಹಿಂಸಾಚಾರ ಹತ್ತಿಕ್ಕುವ ಸಲುವಾಗಿ ಈ ವರೆಗೂ 10 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com