ಡೊನಾಲ್ಡ್ ಟ್ರಂಪ್ ಮತ್ತೊಬ್ಬ ಮಗನಿಗೂ ಕೊರೋನಾ ಸೋಂಕು ದೃಢ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರ ಡೊನಾಲ್ಡ್ ಟ್ರಂಪ್ ಜೂನಿಯರ್ ಗೆ ಕೋವಿಡ್ ಸೋಂಕು ದೃಢಪಟ್ಟಿದೆ ಯಾವುದೇ ರೋಗ ಲಕ್ಷಣ ಇಲ್ಲದ ಕಾರಣ ಅವರು ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

Published: 21st November 2020 09:16 AM  |   Last Updated: 21st November 2020 12:28 PM   |  A+A-


donald trump junior

ಡೊನಾಲ್ಡ್ ಟ್ರಂಪ್ ಜೂನಿಯರ್

Posted By : Manjula VN
Source : Online Desk

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರ ಡೊನಾಲ್ಡ್ ಟ್ರಂಪ್ ಜೂನಿಯರ್ ಗೆ ಕೋವಿಡ್ ಸೋಂಕು ದೃಢಪಟ್ಟಿದೆ ಯಾವುದೇ ರೋಗ ಲಕ್ಷಣ ಇಲ್ಲದ ಕಾರಣ ಅವರು ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಈ ವಾರದ ಆರಂಭದಲ್ಲೇ ಅವರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಅಂದಿನಿಂದ ಅವರು ತಮ್ಮ ಕ್ಯಾಬಿನ್ ನಲ್ಲೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ಪುತ್ರ ಡೊನಾಲ್ಡ್ ಟ್ರಂಪ್ ಜೂನಿಯರ್ ರ ವಕ್ತಾರ ಹೇಳಿಕೆ ನೀಡಿದ್ದಾರೆ 

ಡೊನಾಲ್ಡ್ ಟ್ರಂಪ್ ಜೂನಿಯರ್ ಈ ವಾರದ ಆರಂಭದಲ್ಲಿ ಕೊರೋನಾ ಸೋಂಕಿನ ಬಗ್ಗೆ ತಿಳಿದುಕೊಂಡು ನಂತರ ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗಿದ್ದಾರೆ. ಅವರು ಇಲ್ಲಿಯವರೆಗೆ ಸಂಪೂರ್ಣವಾಗಿ ಲಕ್ಷಣರಹಿತರಾಗಿದ್ದಾರೆ ಮತ್ತು ವೈದ್ಯಕೀಯವಾಗಿ ಶಿಫಾರಸು ಮಾಡಿದ ಎಲ್ಲಾ ಆರೋಗ್ಯ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದಾರೆ.

'ಡೊನಾಲ್ಡ್ ಟ್ರಂಪ್ ಜೂನಿಯರ್ ವೈರಸ್ ಸೋಂಕಿಗೆ ಒಳಗಾದ ಅಮೆರಿಕ ಅಧ್ಯಕ್ಷರ ಕುಟುಂಬದ ಇತ್ತೀಚಿನ ಹೊಸ ಸದಸ್ಯ. ಟ್ರಂಪ್ ಹಾಗೂ ಅವರ ಪತ್ನಿ ಪ್ರಥಮ ಮಹಿಳೆ ಮತ್ತು ಅವರ ಮತ್ತೊಬ್ಬ ಮಗ ಈಗಾಗಲೇ ಸೋಂಕಿ ನಿಂದ ಚೇತರಿಸಿಕೊಂಡಿದ್ದಾರೆ.

Stay up to date on all the latest ಅಂತಾರಾಷ್ಟ್ರೀಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp