'ಕದನ ವಿರಾಮ ಉಲ್ಲಂಘನೆ': ಭಾರತೀಯ ರಾಜತಾಂತ್ರಿಕ ಅಧಿಕಾರಿಗೆ ಪಾಕ್ ಸಮನ್ಸ್

ಗಡಿ ನಿಯಂತ್ರಣ ರೇಖೆ(ಎಲ್‌ಒಸಿ)ಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘಿಸಿದೆ ಎಂದು ಆರೋಪಿಸಿಭಾರತೀಯ ಹಿರಿಯ ರಾಜತಾಂತ್ರಿಕ ಅಧಿಕಾರಿಗೆ ಪಾಕಿಸ್ತಾನ ಸಮನ್ಸ್ ನೀಡಿದೆ.
ಭಾರತೀಯ ಸೇನೆ
ಭಾರತೀಯ ಸೇನೆ

ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆ(ಎಲ್‌ಒಸಿ)ಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘಿಸಿದೆ ಎಂದು ಆರೋಪಿಸಿಭಾರತೀಯ ಹಿರಿಯ ರಾಜತಾಂತ್ರಿಕ ಅಧಿಕಾರಿಗೆ ಪಾಕಿಸ್ತಾನ ಸಮನ್ಸ್ ನೀಡಿದೆ. 

ವಿದೇಶಾಂಗ ಕಚೇರಿ(ಎಫ್‌ಒ) ಪ್ರಕಾರ, ಎಲ್‌ಒಸಿಯ ಖುಯಿರಟ್ಟಾ ಸೆಕ್ಟರ್‌ನಲ್ಲಿ ಭಾನುವಾರ ನಡೆದ ಭಾರತೀಯ ಸೇನೆಯ ಯೋಧರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದಾಗಿ 11 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಆರೋಪಿಸಿದೆ.

ಈ ವರ್ಷ ಭಾರತವು 2,820 ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ವಿದೇಶಾಂಗ ಕಚೇರಿ ಆರೋಪಿಸಿದೆ. ಇದರ ಪರಿಣಾಮವಾಗಿ 26 ಮಂದಿ ಸಾವನ್ನಪ್ಪಿದ್ದು 245 ನಾಗರಿಕರಿಗೆ ಗಂಭೀರ ಗಾಯಗಳಾಗಿವೆ.

2003ರ ಕದನ ವಿರಾಮ ನಿಯಮಗಳನ್ನು ಭಾರತ ಗೌರವಿಸಬೇಕು. ಕದನ ವಿರಾಮ ಉಲ್ಲಂಘನೆಯ ಇತರ ಘಟನೆಗಳನ್ನು ತನಿಖೆ ಮಾಡಿ ಮತ್ತು ನಿಯಂತ್ರಣ ಮತ್ತು ಕಾರ್ಯ ಗಡಿಯುದ್ದಕ್ಕೂ ಶಾಂತಿಯನ್ನು ಕಾಪಾಡಿಕೊಳ್ಳಿ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com