ಪಾಕಿಸ್ತಾನ ಸೇನಾ ಮುಖ್ಯಸ್ಥರೊಂದಿಗೆ ಚೀನಾ ರಕ್ಷಣಾ ಸಚಿವರ ಭೇಟಿ
ಚೀನಾ ರಕ್ಷಣಾ ಸಚಿವ ವೀ ಫೆಂಗ್ ಸೋಮವಾರ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಜ್ವಾ ಅವರನ್ನು ಭೇಟಿಯಾಗಿದ್ದು, ಪ್ರಾದೇಶಿಕ ಭದ್ರತಾ ಅಂಶಗಳ ಬಗ್ಗೆ ಚರ್ಚಿಸುವ ಜೊತೆಗೆ ಉಭಯ ದೇಶಗಳ ನಡುವಣ ರಕ್ಷಣಾ ಸಹಕಾರ ಬಲಪಡಿಸುವ ಹೊಸ ಒಪ್ಪಂದಕ್ಕೆ ಸಹಿ ಹಾಕಲಾಯಿತು.
Published: 30th November 2020 10:30 PM | Last Updated: 30th November 2020 10:30 PM | A+A A-

ಸಾಂದರ್ಭಿಕ ಚಿತ್ರ
ಇಸ್ಲಾಮಾಬಾದ್: ಚೀನಾ ರಕ್ಷಣಾ ಸಚಿವ ವೀ ಫೆಂಗ್ ಸೋಮವಾರ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಜ್ವಾ ಅವರನ್ನು ಭೇಟಿಯಾಗಿದ್ದು, ಪ್ರಾದೇಶಿಕ ಭದ್ರತಾ ಅಂಶಗಳ ಬಗ್ಗೆ ಚರ್ಚಿಸುವ ಜೊತೆಗೆ ಉಭಯ ದೇಶಗಳ ನಡುವಣ ರಕ್ಷಣಾ ಸಹಕಾರ ಬಲಪಡಿಸುವ ಹೊಸ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಸಭೆಯಲ್ಲಿ ಪರಸ್ಪರ ಹಿತಾಸಕ್ತಿಗಳು, ಪ್ರಾದೇಶಿಕ ಭದ್ರತೆ ಹಾಗೂ ದ್ವಿಪಕ್ಷೀಯ ರಕ್ಷಣಾ ಸಹಕಾರ ಬಲಪಡಿಸುವುದು ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಲಾಯಿತು.
ಉಭಯ ದೇಶಗಳ ಸೇನೆ ನಡುವೆ ರಕ್ಷಣಾ ಸಹಕಾರಕ್ಕಾಗಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಪಾಕಿಸ್ತಾನ ಸೇನಾ ಮಾಧ್ಯಮ ವಿಭಾಗ ಇಂಟರ್ ಸರ್ವೀಸ್ ಪಬ್ಲಿಕ್ ರಿಲೇಷನ್ಸ್ ತಿಳಿಸಿದೆ. ಆದರೆ, ಎಂಓಯು ವಿವರಗಳನ್ನು ಬಹಿರಂಗಪಡಿಸಿಲ್ಲ ಎಂಬುದು ಇಲ್ಲಿ ಗಮನಾರ್ಹವಾಗಿದೆ.
ಚೀನಾದ ರಕ್ಷಣಾ ಸಚಿವರು ನಿನ್ನೆ ನೇಪಾಳಕ್ಕೆ ಭೇಟಿ ನೀಡಿ ಪ್ರಧಾನಿ ಕೆ. ಪಿ. ಶರ್ಮಾ ಒಲಿ ಹಾಗೂ ನೇಪಾಳದ ಸೇನಾ ಮುಖ್ಯಸ್ಥ ಜನರಲ್ ಪೂರ್ಣಚಂದ್ರ ತಾಪಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು. ಉಭಯ ದೇಶಗಳ ನಡುವೆ ಸಹಕಾರವನ್ನು ಪುನರಾರಂಭಿಸುವ ಜೊತೆಗೆ ಕೋವಿಡ್-19 ಕಾರಣದಿಂದ ಸ್ಥಗಿತಗೊಂಡಿದ್ದ ತರಬೇತಿ ಕಾರ್ಯಕ್ರಮ ಪುನರಾರಂಭಿಸುವ ಕುರಿತು ಚರ್ಚೆಗಳು ನಡೆದ ಬಗ್ಗೆ ವರದಿಯಾಗಿದೆ.