ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥೆಯಾಗಿ ಭಾರತೀಯ ಮೂಲದ ಮಹಿಳೆ ನೇಮಕ

ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ನ್ಯೂನ್‌ಹ್ಯಾಮ್ ಕಾಲೇಜಿನ ಪ್ರಾದ್ಯಾಪಕಿ ಡಾ. ಮನಾಲಿ ದೇಸಾಯಿ ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಡಾ.ಮನಾಲಿ ದೇಸಾಯಿ
ಡಾ.ಮನಾಲಿ ದೇಸಾಯಿ

ಲಂಡನ್: ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ನ್ಯೂನ್‌ಹ್ಯಾಮ್ ಕಾಲೇಜಿನ ಪ್ರಾದ್ಯಾಪಕಿ ಡಾ. ಮನಾಲಿ ದೇಸಾಯಿ ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಯುನೈಟೆಡ್ ಕಿಂಗ್‌ಡಮ್ ವಿಶ್ವವಿದ್ಯಾನಿಕಯವೊಂದರ ಒಂದು ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರವಾಗಿದ್ದಾರೆ.

ಕಂಪಾರಿಟಿವ್ ಆಂಡ್ ಹಿಸ್ಟೋರಿಕ್ ಸೋಷಿಯಾಲಜಿಯ ರೀಡರ್ ಹಾಗೂ ನ್ಯೂನ್‌ಹ್ಯಾಮ್ ಕಾಲೇಜಿನ ಫೆಲೋ ಆಗಿರುವ ದೇಸಾಯಿ, ಸಾಮಾಜಿಕ ಚಳುವಳಿಗಳು, ಜನಾಂಗೀಯ ಮತ್ತು ಲಿಂಗಭೇದದ ಹಿಂಸಾಚಾರ ಮತ್ತು ವಸಾಹತೋತ್ತರಅಧ್ಯಯನಗಳ ಮೇಲೆ ಸಾಕಷ್ಟು ಸಂಶೋಧನೆ ನಡೆಸಿದ್ದಾರೆ.

"ಸಮಾಜಶಾಸ್ತ್ರವು ನಮ್ಮ ಸುತ್ತಲಿನ ಪ್ರಪಂಚವನ್ನುಅರಿತುಕೊಳ್ಳಲ್ಲು  ಸಾಧ್ಯವಾಗುವ ಸಾಧನಗಳನ್ನು ನೀಡುತ್ತದೆ ಮತ್ತು ಆದ್ದರಿಂದ ಇಂತಹ ಕಠಿಣ ಅವಧಿಯಲ್ಲಿ ಇಲಾಖೆಯ ಮುಖ್ಯಸ್ಥ ಹುದ್ದೆ ಸಿಕ್ಕಿದ್ದು ಉತ್ತಮ ಅವಕಾಶವಾಗಿದೆ  ಎಂದು ನಾನು ಭಾವಿಸುತ್ತೇನೆ" ಎಂದು ದೇಸಾಯಿ ಹೇಳಿದರು, 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com