ಅತ್ಯಾಚಾರವೆಸಗಿ ಬ್ಲಾಕ್'ಮೇಲ್: ಪಾಕಿಸ್ತಾನದಲ್ಲಿ ಹಿಂದೂ ಯುವತಿ ಆತ್ಮಹತ್ಯೆಗೆ ಶರಣು
ಅತ್ಯಾಚಾರವೆಸಗಿದ ಕಾಮುಕರು ಬ್ಲಾಕ್'ಮೇಲ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ನೊಂದ ಹಿಂದೂ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಾಕಿಸ್ತಾನದ ಥರ್ಪಾರ್ಕರ್ ಜಿಲ್ಲೆಯಲ್ಲಿ ನಡೆದಿದೆ.
Published: 01st October 2020 10:57 AM | Last Updated: 01st October 2020 10:57 AM | A+A A-

ಸಂಗ್ರಹ ಚಿತ್ರ
ಸಿಂಧ್: ಅತ್ಯಾಚಾರವೆಸಗಿದ ಕಾಮುಕರು ಬ್ಲಾಕ್'ಮೇಲ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ನೊಂದ ಹಿಂದೂ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಾಕಿಸ್ತಾನದ ಥರ್ಪಾರ್ಕರ್ ಜಿಲ್ಲೆಯಲ್ಲಿ ನಡೆದಿದೆ.
2019ರ ಜುಲೈ ತಿಂಗಳಿನಲ್ಲಿ 17 ವರ್ಷದ ಹಿಂದೂ ಯುವತಿ ಮೇಲೆ ಅತ್ಯಾಚಾರ ನಡೆದಿದ್ದು, ಅತ್ಯಾಚಾರ ವೆಸಗಿದ ಆರೆೋಪಿಗಳು ಪದೇ ಪದೇ ಬ್ಲಾಕ್ ಮೇಲ್ ಮಾಡಿದ್ದಾರೆ. ಅತ್ಯಾಚಾರಿಗಳು ಪ್ರಭಾವಿ ವ್ಯಕ್ತಿಗಳಾಗಿದ್ದಾರೆಂದು ಹೇಳಲಾಗುತ್ತಿದ್ದು, ಈಗಾಗಲೇ ಪ್ರಕರಣ ಸಂಬಂಧ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ.
ಆರೋಪಿಗಳು ಯುವತಿಗೆ ಬ್ಲಾಕ್'ಮೇಲ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ನೊಂದ ಯುವತಿ ಬಾವಿಯೊಂದಕ್ಕೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ವರದಿಗಳು ತಿಳಿಸಿವೆ.
ಆರೋಪಿಗಳು ಅತ್ಯಾಚಾರ ವೆಸಗಿದ್ದೂ ಅಲ್ಲದೆ, ಘಟನೆಯ ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದರು. ಆರೋಪಿಗಳು ಪ್ರಭಾವಿ ವ್ಯಕ್ತಿಗಳಾಗಿದ್ದಾರೆಂದು ಸಂತ್ರಸ್ತೆಯ ಕುಟುಂಬಸ್ಥರು ಹಾಗೂ ಸಂಬಂಧಿಕರು ಹೇಳಿದ್ದಾರೆ.
ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ ಅಬ್ದುಲ್ಲಾ ಅಹ್ಮೆದ್ಯಾರ್ ಅವರು, ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷಾ ವರದಿಯಿಂದ ತಿಳಿದುಬಂದಿದೆ ಎಂದು ಹೇಳಿ್ದದಾರೆ.
ಇನ್ನು ಘಟನೆ ಸಂಬಂಧ ಇದೀಗ ಪ್ರತಿಭಟನೆಗಳು ಭುಗಿಲೆದ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿವಿಧ ಸಂಘಟನೆಗಳು ಆಗ್ರಹಿಸುತ್ತಿವೆ.