ಡೊನಾಲ್ಡ್ ಟ್ರಂಪ್
ಡೊನಾಲ್ಡ್ ಟ್ರಂಪ್

ಈಗ ಆರೋಗ್ಯ ಬಹಳಷ್ಟು ಸುಧಾರಿಸಿದೆ, ಮುಂದಿನ ಕೆಲ ದಿನಗಳು ನಿರ್ಣಾಯಕ: ಡೊನಾಲ್ಡ್ ಟ್ರಂಪ್

ಕೊರೋನಾ ವೈರಸ್ ನಿಂದ ಬಳಲುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈಗ ಸ್ವಲ್ಪ ಆರಾಮಾಗಿದ್ದೇನೆ, ಚೇತರಿಸಿಕೊಳ್ಳುತ್ತಿದ್ದೇನೆ, ಆದರೆ ಇನ್ನು ಕೆಲವು ದಿನಗಳವರೆಗೆ ಸಂಪೂರ್ಣ ವಿಶ್ರಾಂತಿ ಬೇಕಿದೆ ಎಂದು ಹೇಳಿದ್ದಾರೆ.

ಬೆತೆಸ್ಡ: ಕೊರೋನಾ ವೈರಸ್ ನಿಂದ ಬಳಲುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈಗ ಸ್ವಲ್ಪ ಆರಾಮಾಗಿದ್ದೇನೆ, ಚೇತರಿಸಿಕೊಳ್ಳುತ್ತಿದ್ದೇನೆ, ಆದರೆ ಇನ್ನು ಕೆಲವು ದಿನಗಳವರೆಗೆ ಸಂಪೂರ್ಣ ವಿಶ್ರಾಂತಿ ಬೇಕಿದೆ ಎಂದು ಹೇಳಿದ್ದಾರೆ.

ನಿನ್ನೆ ಟ್ವಿಟ್ಟರ್ ನಲ್ಲಿ ವಿಡಿಯೊ ಮಾಡಿ ಪೋಸ್ಟ್ ಮಾಡಿರುವ 74 ವರ್ಷದ ಡೊನಾಲ್ಡ್ ಟ್ರಂಪ್, ಮುಂದಿನ 48 ಗಂಟೆಗಳು ಅತ್ಯಂತ ನಿರ್ಣಾಯಕವಾಗಿದೆ. ನನ್ನ ಆರೋಗ್ಯದಲ್ಲಿ ಏರಿಳಿತ ಕಂಡುಬಂದ ಕಾರಣ ಆಸ್ಪತ್ರೆಗೆ ಬಂದು ದಾಖಲಾದೆ ಎಂದು ಹೇಳಿದ್ದಾರೆ. ಟ್ರಂಪ್ ಅವರಿಗೆ ಕೋವಿಡ್-10 ಸೋಂಕು ಪತ್ತೆಯಾದ ನಂತರ ಆರೋಗ್ಯದಲ್ಲಿ ಏರಿಳಿತ ಕಂಡುಬಂದು ವಾಷಿಂಗ್ಟನ್ ಸಮೀಪ ವಾಲ್ಟರ್ ರೀಡ್ ಮಿಲಿಟರಿ ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈಗ ಆರೋಗ್ಯ ತುಂಬಾ ಸುಧಾರಿಸಿದೆ, ಮೊದಲಿನಂತೆ ಸಹಜ ಸ್ಥಿತಿಗೆ ಬರಲು ಆಸ್ಪತ್ರೆಯಲ್ಲಿ ವೈದ್ಯರು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ ಎಂದರು.

Related Stories

No stories found.

Advertisement

X
Kannada Prabha
www.kannadaprabha.com