ಜಾಧವ್ ಪರ ವಕೀಲರನ್ನು ನೇಮಕ ಮಾಡುವಲ್ಲಿ ಭಾರತ ವಿಫಲ: ಪಾಕಿಸ್ತಾನ

ಕುಲಭೂಷಣ್ ಜಾಧವ್ ಅವರಿಗೆ ಮಿಲಿಟರಿ ನ್ಯಾಯಾಲಯ ವಿಧಿಸಿರುವ ಮರಣದಂಡನೆ ಮರು ಪರಿಶೀಲನೆಗಾಗಿ ವಕೀಲರನ್ನು ನೇಮಕ ಮಾಡುವಲ್ಲಿ ಭಾರತ ವಿಫಲವಾಗಿದೆ  ಎಂದು ಪಾಕಿಸ್ತಾನ ಸರ್ಕಾರ ಅಲ್ಲಿನ ನ್ಯಾಯಾಲಯಕ್ಕೆ ತಿಳಿಸಿದೆ.
ಕುಲಭೂಷಣ್ ಜಾಧವ್
ಕುಲಭೂಷಣ್ ಜಾಧವ್

ಇಸ್ಲಾಮಾಬಾದ್: ಕುಲಭೂಷಣ್ ಜಾಧವ್ ಅವರಿಗೆ ಮಿಲಿಟರಿ ನ್ಯಾಯಾಲಯ ವಿಧಿಸಿರುವ ಮರಣದಂಡನೆ ಮರು ಪರಿಶೀಲನೆಗಾಗಿ ವಕೀಲರನ್ನು ನೇಮಕ ಮಾಡುವಲ್ಲಿ ಭಾರತ ವಿಫಲವಾಗಿದೆ  ಎಂದು ಪಾಕಿಸ್ತಾನ ಸರ್ಕಾರ ಅಲ್ಲಿನ ನ್ಯಾಯಾಲಯಕ್ಕೆ ತಿಳಿಸಿದೆ.

ಈ ಪ್ರಕರಣದಲ್ಲಿ ಮುಕ್ತ ಮತ್ತು ನ್ಯಾಯಯುತ ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು ಜಾಧವ್‌ಗೆ ಭಾರತೀಯ ವಕೀಲರನ್ನು ಎಂಬ ಭಾರತದ ಬೇಡಿಕೆಯನ್ನು ಪಾಕಿಸ್ತಾನ ಗುರುವಾರ ಮತ್ತೊಮ್ಮೆ ತಿರಸ್ಕರಿಸಿದ ನಂತರ ಇದು ನಡೆದಿದೆ.

50 ವರ್ಷದ ನಿವೃತ್ತ ಭಾರತೀಯ ನೌಕಾಪಡೆಯ ಅಧಿಕಾರಿ ಜಾಧವ್‌ಗೆ 2017 ರ ಏಪ್ರಿಲ್‌ನಲ್ಲಿ ಗೂಢ  ಚರ್ಯೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು.

ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ ಬಳಿಕ ಜಾಧವ್‌ ಅವರಿಗೆ ಪಾಕ್‌ ಮಿಲಿಟರಿ ಕೋರ್ಟ್‌ ವಿಧಿಸಿರುವ ಮರಣ ದಂಡನೆ ಶಿಕ್ಷೆ ಜಾರಿಗೊಳಿಸುವುದು ಕಷ್ಟಕರವಾಗಿ ಪರಿಣಮಿಸಿದೆ. ಅವರಿಗೆ ವಿಧಿಸಿರುವ ಶಿಕ್ಷೆ ಮರು ಪರಿಶೀಲಿಸುತ್ತಿರುವ ಇಸ್ಲಾಮಾಬಾದ್‌ ಹೈಕೋರ್ಟ್‌, ಸೂಕ್ತ ವಕೀಲರ ನೇಮಕಕ್ಕೆ ಅವಕಾಶ ನೀಡುವಂತೆ ಸೂಚಿಸಿದೆ.ಮುಂದಿನ ವಿಚಾರಣೆಯನ್ನು ನವೆಂಬರ್ 9ಕ್ಕೆ ನ್ಯಾಯಾಲಯ ಮುಂದೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com