ಕೋವಿಡ್-19: ವಿಶ್ವದಾದ್ಯಂತ 3.95 ಕೋಟಿಗೇರಿದ ಸೋಂಕಿತರ ಸಂಖ್ಯೆ 

ಜಾಗತಿಕ ಕೊವಿಡ್ ಪ್ರಕರಣಗಳ ಸಂಖ್ಯೆ 3 ಕೋಟಿ 95 ಲಕ್ಷ ದಾಟಿದ್ದು, ಸಾವಿನ ಸಂಖ್ಯೆ 1,106,705ಕ್ಕೆ ಏರಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾಷಿಂಗ್ಟನ್: ಜಾಗತಿಕ ಕೊವಿಡ್ ಪ್ರಕರಣಗಳ ಸಂಖ್ಯೆ 3 ಕೋಟಿ 95 ಲಕ್ಷ ದಾಟಿದ್ದು, ಸಾವಿನ ಸಂಖ್ಯೆ 1,106,705ಕ್ಕೆ ಏರಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.

ಸದ್ಯ, ವಿಶ್ವದಾದ್ಯಂತ ಒಟ್ಟು ಪ್ರಕರಣಗಳ ಸಂಖ್ಯೆ 39,502,909 ಸಾವಿನ ಸಂಖ್ಯೆ 1,106,705ಕ್ಕೆ ಏರಿಕೆಯಾಗಿದೆ ಎಂದು ವಿಶ್ವವಿದ್ಯಾಲಯದ ಸಿಸ್ಟಮ್ಸ್ ಸೈನ್ಸ್ ಮತ್ತು ಇಂಜನಿಯರಿಂಗ್ ಕೇಂದ್ರ ತನ್ನ ನವೀಕೃತ ಮಾಹಿತಿ ಸಂಚಿಕೆಯಲ್ಲಿ ತಿಳಿಸಿದೆ.

39,502,909 ಮಂದಿ ಒಟ್ಟಾರೆ ಸೋಂಕಿತರ ಪೈಕಿ 27,148,927 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 8,954,631 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಹೆಚ್ಚು ಚೇತರಿಕೆ ಪ್ರಮಾಣ ಹೊಂದಿರುವ ಪಟ್ಟಿಯಲ್ಲಿ ಭಾರತದ ಮೊದಲ ಸ್ಥಾನದಲ್ಲಿದ್ದು, ಭಾರತದಲ್ಲಿ ಈ ವರೆಗೂ 65,97,210 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 7,83,311 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ವಿಶ್ವದ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಅಮೆರಿಕಾದಲ್ಲಿಯೇ ಕೊರೋನಾ ಮಹಾಮಾರಿಯ ಆರ್ಭಟ ಹೆಚ್ಚಾಗಿದ್ದು, ಈ ವರೆಗೂ ಅಮೆರಿಕಾದಲ್ಲಿ 8,086,780 ಮಂದಿ ಸೋಂಕಿಗೊಳಗಾಗಿದ್ದಾರೆ. ಅಲ್ಲದೆ, 218,980 ಮಂದಿ ಸಾವನ್ನಪ್ಪಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com