ಫತ್ಫ್ (FATF): ಗ್ರೇ ಪಟ್ಟಿಯಲ್ಲಿ ಉಳಿಯಲಿರುವ ಪಾಕಿಸ್ತಾನ

ಗ್ಲೋಬಲ್ ವಾಚ್‌ ಡಾಗ್ ಸಿದ್ದ ಪಡಿಸಿರುವ ಹಣಕಾಸು ಕ್ರಿಯಾ ಯೋಜನೆಯ(ಎಫ್‌ಎಟಿಎಫ್‌) 27 ಅಂಶಗಳಲ್ಲಿ ಆರು ಅಂಶಗಳನ್ನು ಅನುಸರಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಪಾಕಿಸ್ತಾನ ಫತ್ಫ್ ನ ಗ್ರೇ ಪಟ್ಟಿಯಲ್ಲೇ ಉಳಿಯಲಿದೆ ಎಂದು ಹೇಳಲಾಗಿದೆ.
ಇಮ್ರಾನ್ ಖಾನ್
ಇಮ್ರಾನ್ ಖಾನ್

ವಾಷಿಂಗ್ಟನ್: ಗ್ಲೋಬಲ್ ವಾಚ್‌ ಡಾಗ್ ಸಿದ್ದ ಪಡಿಸಿರುವ ಹಣಕಾಸು ಕ್ರಿಯಾ ಯೋಜನೆಯ(ಎಫ್‌ಎಟಿಎಫ್‌) 27 ಅಂಶಗಳಲ್ಲಿ ಆರು ಅಂಶಗಳನ್ನು ಅನುಸರಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಪಾಕಿಸ್ತಾನ ಫತ್ಫ್ ನ ಗ್ರೇ ಪಟ್ಟಿಯಲ್ಲೇ ಉಳಿಯಲಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಅಂತಾರಾಷ್ಟ್ರೀಯ ಹಣಕಾಸು ಕ್ರಿಯಾ ಕಾರ್ಯಪಡೆ (Financial Action Task Force) ಸಿದ್ದ ಪಡಿಸಿರುವ 27 ಅಂಶಗಳಲ್ಲಿ ಆರು ಅಂಶಗಳನ್ನು ಅನುಸರಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಪಾಕಿಸ್ತಾನ ಫತ್ಫ್ ನ ಗ್ರೇ ಪಟ್ಟಿಯಲ್ಲೇ  ಉಳಿಯಲಿದೆ. ಇಂದಿನಿಂದ ಅ.23ರವರೆಗೆ ’ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವುದು ಮತ್ತು ಅಕ್ರಮ ಹಣ ವರ್ಗಾವಣೆ’ ಕುರಿತು ಪ್ಯಾರಿಸ್‌ ಮೂಲದ ಗ್ಲೋಬಲ್ ವಾಚ್‌ಡಾಗ್‌ ಸಂಸ್ಥೆ ಆಯೋಜಿಸಿರುವ ವರ್ಚುವಲ್ ಪ್ಲೀನರಿ ಅಧಿವೇಶದಲ್ಲಿ, ಈ 27 ಅಂಶಗಳ ಕ್ರಿಯಾ ಯೋಜನೆಯಲ್ಲಿ ಪಾಕಿಸ್ತಾನ ಯಾವ  ಸ್ಥಾನದಲ್ಲಿದೆ ಎಂದು ಪ್ರಗತಿ ಪರಿಶೀಲಿಸಲಾಗುತ್ತದೆ.

ಎಫ್‌ಎಟಿಎಫ್‌ (FATF)ಪಾಕಿಸ್ತಾನವನ್ನು ಜೂನ್ 2018ರಲ್ಲಿ ಗ್ರೇ ಪಟ್ಟಿಗೆ ಸೇರಿಸಿತ್ತು. 2019ರೊಳಗೆ ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವುದು ಮತ್ತು ಅಕ್ರಮ ಹಣ ವರ್ಗಾವಣೆಯನ್ನು ನಿಯಂತ್ರಿಸುವಂತೆ ಕೇಳಿತ್ತು. ಆದರೆ, ಕೋವಿಡ್‌ 19 ಸಾಂಕ್ರಾಮಿಕ ರೋಗದ ಕಾರಣದಿಂದ ಪಾಕಿಸ್ತಾನಕ್ಕೆ  ನೀಡಿದ್ದ ಗಡುವನ್ನು ವಿಸ್ತರಿಸಿತ್ತು. ಮುಂದಿನ ವರ್ಷದ ಜೂನ್ ವೇಳೆಗೆ ಎಫ್‌ಎಟಿಎಫ್‌ನ (FATF) ಗ್ರೇ ಪಟ್ಟಿಯಿಂದ ನಿರ್ಗಮಿಸುವಲ್ಲಿ ಪಾಕಿಸ್ತಾನ ಯಶಸ್ವಿಯಾಗಲಿದೆ ಎಂದು ಪಾಕಿಸ್ತಾನದ ರಾಜತಾಂತ್ರಿಕ ಕಚೇರಿಯ ಮೂಲಗಳನ್ನು ಉಲ್ಲೇಖಿಸಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ. ಅದೇ ವರದಿಯಲ್ಲಿರುವಂತೆ,  ಪಾಕಿಸ್ತಾನವು ಎಫ್‌ಎಟಿಎಫ್ ಗ್ರೇ ಪಟ್ಟಿಯಿಂದ ಹೊರಬರುವ ಸಾಧ್ಯತೆ ಕಡಿಮೆ ಎಂದೂ ಉಲ್ಲೇಖಿಸಲಾಗಿದೆ.

ಅಂತೆಯೇ ವರದಿಯಲ್ಲಿ ಪಾಕಿಸ್ತಾನ ಕಪ್ಪುಪಟ್ಟಿಗೆ ಸೇರುವುದನ್ನು ತಪ್ಪಿಸುವಲ್ಲಿ ಯಶಸ್ವಿಯಾಗಲಿದೆ. ಪಾಕಿಸ್ತಾನ ಕಾನೂನು ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ ಹಾಗೂ ಕ್ರಿಯಾ ಯೋಜನೆಯಲ್ಲಿ 21 ಅಂಶಗಳನ್ನು ಅನುಸರಿಸಲು ಯಶಸ್ವಿಯಾಗಿದೆ’ ಎಂದು ವಾಚ್‌ಡಾಗ್‌ಗೆ ತಿಳಿಸಿರುವುದಾಗಿ ವರದಿಯಲ್ಲಿ ಹೇಳಿದೆ. ಕ್ರಿಯಾ  ಯೋಜನೆಯ ಉಳಿದ ಆರು ಅಂಶಗಳಲ್ಲಿ ಶೇ 20 ರಷ್ಟು ಪ್ರಗತಿ ಸಾಧಿಸುವಲ್ಲಿ ಪಾಕಿಸ್ತಾನ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ.

ಫತ್ಫ್ ನ ಗ್ರೇ ಪಟ್ಟಿಯಿಂದ ಹೊರಬರಲು ಪಾಕಿಸ್ತಾನಕ್ಕೆ ನಿಷೇಧಿತ 88 ಭಯೋತ್ಪಾದಕ ಗುಂಪುಗಳು ಮತ್ತು ಅವರ ನಾಯಕರ ಮೇಲೆ ಆರ್ಥಿಕ ನಿರ್ಬಂಧಗಳನ್ನು ವಿಧಿಸಲು ಸೂಚಿಸಲಾಗಿತ್ತು. ಇದರಲ್ಲಿ 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಮತ್ತು ಜಮಾತ್-ಉದ್-ದವಾ (ಜುಡಿ) ಮುಖ್ಯಸ್ಥ ಹಫೀಜ್ ಸಯೀದ್, ಜೈಶ್- ಇ-ಮೊಹಮ್ಮದ್ (ಜೆಎಂ) ಮುಖ್ಯಸ್ಥ ಮಸೂದ್ ಅಜರ್ ಮತ್ತು ಭೂಗತ ಡಾನ್ ದಾವೂದ್ ಇಬ್ರಾಹಿಂ ಸೇರಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com