ಕೋವಿಡ್-19: ಅಧ್ಯಕ್ಷೀಯ ಚುನಾವಣೆ ನಡುವೆಯೇ ಅಮೆರಿಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಾಖಲೆ ಏರಿಕೆ

ಮಾರಕ ಕೊರೋನಾ ವೈರಸ್ ದಾಳಿಗೆ ಭೀಕರವಾಗಿ ತುತ್ತಾಗಿದ್ದ ಅಮೆರಿಕದಲ್ಲಿ ಮತ್ತೆ ಸೋಂಕು ತನ್ನ ಎರಡನೇ ಅಲೆ ಆರಂಭಿಸಿದ್ದು. ಕಳೆದ 24 ಗಂಟೆಗಳ ಅವಧಿಯಲ್ಲಿ 80 ಸಾವಿರಕ್ಕೂ ಅಧಿಕ ಮಂದಿ ಸೋಂಕಿಗೆ ತುತ್ತಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾಷಿಂಗ್ಟನ್: ಮಾರಕ ಕೊರೋನಾ ವೈರಸ್ ದಾಳಿಗೆ ಭೀಕರವಾಗಿ ತುತ್ತಾಗಿದ್ದ ಅಮೆರಿಕದಲ್ಲಿ ಮತ್ತೆ ಸೋಂಕು ತನ್ನ ಎರಡನೇ ಅಲೆ ಆರಂಭಿಸಿದ್ದು. ಕಳೆದ 24 ಗಂಟೆಗಳ ಅವಧಿಯಲ್ಲಿ 80 ಸಾವಿರಕ್ಕೂ ಅಧಿಕ ಮಂದಿ ಸೋಂಕಿಗೆ ತುತ್ತಾಗಿದ್ದಾರೆ.

ಹೌದು..ವಿಶ್ವಾದ್ಯಂತ ಅಮೆರಿಕವೂ ಸೇರಿದಂತೆ ಕೆಲವು ದೇಶಗಳಲ್ಲಿ ಕೊರೊನಾ ವೈರಸ್ ಸೋಂಕಿನ ಹರಡುವಿಕೆ ಕಳೆದ ಕೆಲವು ದಿನಗಳಿಂದ ಮತ್ತೆ ಹೆಚ್ಚಾಗಿದೆ. ಪ್ರತಿ ದಿನ ಪತ್ತೆಯಾಗುವ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಪ್ರಮುಖವಾಗಿ ಕಳೆದೊಂದು ವಾರದಿಂದ ಅಮೆರಿಕದಲ್ಲಿ ಪ್ರತಿನಿತ್ಯ  ಹೊಸ ಸೋಂಕಿತರ ಸಂಖ್ಯೆ 80 ಸಾವಿರ ದಾಟುತ್ತಿದೆ. ನಿನ್ನೆ ಒಂದೇ ದಿನ ಅಮೆರಿಕದಲ್ಲಿ 83,010 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 87,46,953 ಕ್ಕೆ ಏರಿಕೆಯಾಗಿದೆ.ಈ ಪೈಕಿ 56,98,161 ಮಂದಿ ಸೋಂಕಿತರು ಗುಣಮುಖರಾಗಿದ್ದು, ನಿನ್ನೆ ಒಂದೇ ದಿನ 903 ಮಂದಿ  ಮೃತಪಟ್ಟಿದ್ದಾರೆ. ಇದರೊಂದಿಗೆ ಅಲ್ಲಿ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದವರ ಸಂಖ್ಯೆ 2,29,284ಕ್ಕೆ ಏರಿಕೆಯಾಗಿದೆ.

ಬ್ರೆಜಿಲ್‌ನಲ್ಲಿ ಒಂದೇ ದಿನ 23,016, ಕೆನಡಾದಲ್ಲಿ 2,584, ಅರ್ಜೆಂಟೀನಾದಲ್ಲಿ 15,718, ಜರ್ಮನಿಯಲ್ಲಿ 13,476, ಫ್ರಾನ್ಸ್‌ನಲ್ಲಿ 42,032, ಸ್ಪೇನ್‌ನಲ್ಲಿ 19,851, ಬ್ರಿಟನ್‌ನಲ್ಲಿ 20,530 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇನ್ನು ವರ್ಲ್ಡೋಮೀಟರ್ ಕೋವಿಡ್‌ ಟ್ರ್ಯಾಕರ್‌ ವೆಬ್‌ಸೈಟ್‌ ಪ್ರಕಾರ, ವಿಶ್ವದಾದ್ಯಂತ ಈವರೆಗೆ 4.2 ಕೋಟಿಗೂ ಹೆಚ್ಚು ಮಂದಿ ಸೋಂಕಿತರಾಗಿದ್ದು, 11.4 ಲಕ್ಷಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಒಟ್ಟು 3.1 ಕೋಟಿಗೂ ಹೆಚ್ಚು ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com