ಜಾಗತಿಕವಾಗಿ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷಕ್ಕೆ ಏರಿಕೆ

ಜಗತ್ತಿನಾದ್ಯಂತ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾಷಿಂಗ್ಟನ್: ಜಗತ್ತಿನಾದ್ಯಂತ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ಪ್ರಸ್ತುತ ಪ್ರಕರಣವು 43,346,888 ರಷ್ಟಿದ್ದು, 1,159,097 ಸಾವುಗಳು ಮತ್ತು ಈವರೆಗೆ 31,905,975 ಜನರು ಚೇತರಿಸಿಕೊಂಡಿದ್ದಾರೆ ಎಂದೂ ವರದಿಗಳು ತಿಳಿಸಿವೆ.

ಹೆಚ್ಚು ಚೇತರಿಕೆ ಪ್ರಮಾಣ ಹೊಂದಿರುವ ಪಟ್ಟಿಯಲ್ಲಿ ಭಾರತದ ಮೊದಲ ಸ್ಥಾನದಲ್ಲಿದ್ದು, ಭಾರತದಲ್ಲಿ ಈ ವರೆಗೂ  71,37,229 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 6,53,717ರಷ್ಟು ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ವಿಶ್ವದ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಅಮೆರಿಕಾದಲ್ಲಿಯೇ ಕೊರೋನಾ ಮಹಾಮಾರಿಯ ಆರ್ಭಟ ಹೆಚ್ಚಾಗಿದ್ದು, ಈ ವರೆಗೂ ಅಮೆರಿಕಾದಲ್ಲಿ 8,889,179 ಮಂದಿ ಸೋಂಕಿಗೊಳಗಾಗಿದ್ದಾರೆ. ಅಲ್ಲದೆ, 230,510 ಮಂದಿ ಸಾವನ್ನಪ್ಪಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com