65ರ ವಯಸ್ಸಿನಲ್ಲಿ ಮತ್ತೆ ಸಪ್ತಪದಿ ತುಳಿಯಲಿರುವ  ಹಿರಿಯ ವಕೀಲ ಹರೀಶ್ ಸಾಳ್ವೆ

ಪಾಕಿಸ್ತಾನದಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತದ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಲು ಕೇವಲ 1 ರೂ. ಶುಲ್ಕ ಪಡೆಯುವ ಮೂಲಕ ಸುದ್ದಿಯಾಗಿದ್ದ ಹಿರಿಯ ವಕೀಲ ಹರೀಶ್ ಸಾಳ್ವೆ, ಲಂಡನ್ ಮೂಲದ ಕಲಾವಿದೆಯೊಂದಿಗೆ ಮತ್ತೆ ಸಪ್ತಪದಿ ತುಳಿಯಲು ಸಿದ್ಧತೆ ನಡೆಸಿದ್ದಾರೆ.
ಕ್ಯಾರೋಲಿನ್ ಬ್ರೋಸಾರ್ಡ್-ಹರೀಶ್ ಸಾಳ್ವೆ
ಕ್ಯಾರೋಲಿನ್ ಬ್ರೋಸಾರ್ಡ್-ಹರೀಶ್ ಸಾಳ್ವೆ

ಲಂಡನ್: ಪಾಕಿಸ್ತಾನದಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತದ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಲು ಕೇವಲ 1 ರೂ. ಶುಲ್ಕ ಪಡೆಯುವ ಮೂಲಕ ಸುದ್ದಿಯಾಗಿದ್ದ ಹಿರಿಯ ವಕೀಲ ಹರೀಶ್ ಸಾಳ್ವೆ, ಲಂಡನ್ ಮೂಲದ ಕಲಾವಿದೆಯೊಂದಿಗೆ ಮತ್ತೆ ಸಪ್ತಪದಿ ತುಳಿಯಲು ಸಿದ್ಧತೆ ನಡೆಸಿದ್ದಾರೆ.

ಮುಂದಿನ ಬುಧವಾರ ನಡೆಯಲಿರುವ ವಿವಾಹದಲ್ಲಿ ಲಂಡನ್ ಮೂಲದ ಕಲಾವಿದೆ ಕ್ಯಾರೋಲಿನ್ ಬ್ರೋಸಾರ್ಡ್ ಅವರನ್ನು ಚರ್ಚ್ನಲ್ಲಿ ಸಾಳ್ವೆ ವರಿಸಲಿದ್ದಾರೆ ಎಂದು ವರದಿಯಾಗಿದೆ.  

ಭಾರತದ ಮಾಜಿ ಸಾಲಿಸಿಟರ್ ಜನರಲ್ ಆಗಿರುವ 65 ವರ್ಷದ ಹರೀಶ್ ಸಾಳ್ವೆ, ಜನವರಿಯಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್ನ ಕ್ವೀನ್ಸ್ ಕೌನ್ಸೆಲ್ ಆಗಿ ನೇಮಕವಾಗಿದ್ದರು. ಸಾಳ್ವೆ ಅವರು ಉತ್ತರ ಲಂಡನ್ ನಲ್ಲಿ ನೆಲೆಸಿದ್ದು, ಚಿತ್ರಕಲಾ ಕಾರ್ಯಕ್ರಮವೊಂದರಲ್ಲಿ ಕ್ಯಾರೋಲಿನ್ ಅವರನ್ನು ಭೇಟಿಯಾಗಿದ್ದರು. ಸುಮಾರು ಒಂದು ವರ್ಷಗಳಿಂದ ಇಬ್ಬರೂ ಪರಿಚಿತರಾಗಿದ್ದಾರೆ.

ಬ್ರಿಟನ್ನಲ್ಲಿ ಜನಿಸಿದ ಕ್ಯಾರೋಲಿನ್ ಅವರಿಗೆ 18 ವರ್ಷದ ಮಗಳಿದ್ದಾಳೆ. ಕಲೆಯ ಜತೆಗೆ ತಮ್ಮಿಬ್ಬರಿಗೂ ರಂಗಭೂಮಿ ಹಾಗೂ ಶಾಸ್ತ್ರೀಯ ಸಂಗೀತದ ಬಗ್ಗೆ ಒಂದೇ ರೀತಿಯ ಅಭಿರುಚಿ ಇದೆ ಎಂದೂ ಸಾಳ್ವೆ ತಿಳಿಸಿದ್ದಾರೆ. ಲಂಡನ್ ನಲ್ಲಿ 15 ಜನರು ಮಾತ್ರವೇ ಸೇರಲು ಅವಕಾಶ ಇರುವುದರಿಂದ ಈ ಮದುವೆ ಅತ್ಯಂತ ಸರಳವಾಗಿ ನಡೆಯಲಿದೆ.

ಸಾಳ್ವೆ ಅವರು ಕಳೆದ ಜೂನ್ ತಿಂಗಳಲ್ಲೇ ಮೊದಲ ಪತ್ನಿ ಮೀನಾಕ್ಷಿ ಸಾಳ್ವೆ ಅವರಿಗೆ ವಿಚ್ಛೇದನ ನೀಡಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಮೊದಲ ಮಗಳು 37 ವರ್ಷದ ಸಾಕ್ಷಿ, ಎರಡನೇ ಮಗಳು 33 ವರ್ಷದ ಸಾನಿಯಾ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com