ಬ್ರೆಜಿಲ್'ನಲ್ಲಿ ಕೊರೋನಾ ಅಬ್ಬರ: 40 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಮಹಾಮಾರಿ ಕೊರೋನಾ ವೈರಸ್ ಬ್ರೆಜಿಲ್ ನಲ್ಲಿ ತನ್ನ ರೌದ್ರನರ್ತನವನ್ನು ಮುಂದುವರೆಸಿದ್ದು, ಸೋಂಕಿತರ ಸಂಖ್ಯೆ 40 ಲಕ್ಷ ಗಡಿ ದಾಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬ್ರೆಸಿಲಿಯಾ: ಮಹಾಮಾರಿ ಕೊರೋನಾ ವೈರಸ್ ಬ್ರೆಜಿಲ್ ನಲ್ಲಿ ತನ್ನ ರೌದ್ರನರ್ತನವನ್ನು ಮುಂದುವರೆಸಿದ್ದು, ಸೋಂಕಿತರ ಸಂಖ್ಯೆ 40 ಲಕ್ಷ ಗಡಿ ದಾಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಕಳೆದ 24 ಗಂಟೆಗಳಲ್ಲಿ ಬ್ರೆಜಿಲ್ ನಲ್ಲಿ 43,773 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,041,638ಕ್ಕೆ ಏರಿಕೆಯಾಗಿದೆ. 

ಇನ್ನು ಒಂದೇ ದಿನ 834 ಮಂದಿ ಬಲಿಯಾಗಿದ್ದು, ಈ ವರೆಗೂ 124,614 ಮಂದಿ ಮಹಾಮಾರಿ ವೈರಸ್ ನಿಂದ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 

ಇನ್ನು 4,041,638ಕ್ಕೆ ಮಂದಿ ಸೋಂಕಿತರ ಪೈಕಿ 3,247,610 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com