2.86 ಕೋಟಿ ದಾಟಿದ ಜಾಗತಿಕ ಕೊವಿಡ್ ಪ್ರಕರಣಗಳ ಸಂಖ್ಯೆ

ಜಾಗತಿಕವಾಗಿ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 2 ಕೋಟಿ 86 ಲಕ್ಷ ತಲುಪಿದ್ದು, ಒಟ್ಟು ಸಾವಿನ ಸಂಖ್ಯೆ 9,18,000 ಕ್ಕಿಂತ ಮೀರಿದೆ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾಷಿಂಗ್ಟನ್: ಜಾಗತಿಕವಾಗಿ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 2 ಕೋಟಿ 86 ಲಕ್ಷ ತಲುಪಿದ್ದು, ಒಟ್ಟು ಸಾವಿನ ಸಂಖ್ಯೆ 9,18,000 ಕ್ಕಿಂತ ಮೀರಿದೆ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ.

ಒಟ್ಟು ಪ್ರಕರಣಗಳ ಸಂಖ್ಯೆ 28,650,588 ಹಾಗೂ ಸಾವಿನ ಸಂಖ್ಯೆ 9,18,796 ಕ್ಕೆ ಏರಿದೆ ಎಂದು ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್ಎಸ್ಇ) ತನ್ನ ಇತ್ತೀಚಿನ ನವೀಕೃತ ಮಾಹಿತಿಯಲ್ಲಿ ತಿಳಿಸಿದೆ.

ಸಿಎಸ್ಎಸ್ಇ ಅಂಕಿ-ಅಂಶಗಳಂತೆ, ಅಮೆರಿಕದಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಪ್ರಕರಣಗಳು ಮತ್ತು ಸಾವುಗಳು ಕ್ರಮವಾಗಿ 64,82,503 ಮತ್ತು 1,93,670ರಷ್ಟಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com