ಚೀನಾವನ್ನು ಸೋಲಿಸಿ, ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಗೆ ಭಾರತ ಆಯ್ಕೆ

ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಾದ ಮಹಿಳೆಯರ ಸ್ಥಿತಿಗತಿ ಆಯೋಗದ ಸದಸ್ಯ ರಾಷ್ಟ್ರವಾಗಿ ಭಾರತ ಆಯ್ಕೆಯಾಗಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಹೇಳಿದ್ದಾರೆ.
ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ
ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ

ವಾಷಿಂಗ್ಟನ್:  ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಾದ ಮಹಿಳೆಯರ ಸ್ಥಿತಿಗತಿ ಆಯೋಗದ ಸದಸ್ಯ ರಾಷ್ಟ್ರವಾಗಿ ಭಾರತ ಆಯ್ಕೆಯಾಗಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಹೇಳಿದ್ದಾರೆ.

ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಲ್ಲಿ ಪ್ರತಿಷ್ಠಿತ ಸ್ಥಾನವನ್ನು ಭಾರತ ಗೆದ್ದಿದೆ. ಮಹಿಳೆಯರ ಸ್ಥಿತಿಗತಿ ಆಯೋಗದ ಸದಸ್ಯ ರಾಷ್ಟ್ರವಾಗಿ ಭಾರತ ಆಯ್ಕೆಯಾಗಿದೆ. ಇದು ನಮ್ಮ ಪ್ರತಿ ಪ್ರಯತ್ನಗಳಲ್ಲಿ ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣವನ್ನು ಉತ್ತೇಜಿಸುವ ಬದ್ಧತೆಯನ್ನು ಬಿಂಬಿಸುವ ಅನುಮೋದನೆಯಾಗಿದೆ.ಎಲ್ಲಾ ಸದಸ್ಯ ರಾಷ್ಟ್ರಗಳ ಬೆಂಬಲಕ್ಕಾಗಿ ನಾವು ಧನ್ಯವಾದ ತಿಳಿಸುತ್ತೇವೆ ಎಂದು ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಆಯೋಗದ ಸದಸ್ಯತ್ವಕ್ಕಾಗಿ ಭಾರತ, ಅಪ್ಘಾನಿಸ್ತಾನ ಮತ್ತು ಚೀನಾ ರಾಷ್ಟ್ರಗಳು ಸ್ಪರ್ಧಿಸಿದ್ದವು. 54 ಸದಸ್ಯ ರಾಷ್ಟ್ರಗಳು ಮತ ಚಲಾಯಿಸಿದ್ದವು. ಅಪ್ಘಾನಿಸ್ಥಾನ 39, ಭಾರತ 38 ಮತ ಗಳಿಸಿದರೆ ಚೀನಾಗೆ 27 ಸದಸ್ಯರ ಮತ ಲಭ್ಯವಾಯಿತು. ಈ ಮೂಲಕ ಭಾರತ ಮುಂದಿನ 4 ವರ್ಷಗಳ ಅವಧಿಗೆ ವಿಶ್ವಸಂಸ್ಥೆಯ ಆಯೋಗದ ಸದಸ್ಯ ರಾಷ್ಟ್ರವಾಗಿ ಮುಂದುವರೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com