ಕೋವಿಡ್‍-19: ಅಮೆರಿಕಾದಲ್ಲಿ 2 ಲಕ್ಷ ದಾಟಿದ ಸಾವಿನ ಸಂಖ್ಯೆ

ಕೊರೋನಾವೈರಸ್ ಸೋಂಕಿನಿಂದ ವಿಶ್ವದಲ್ಲೇ ಅತಿಹೆಚ್ಚು ಬಾಧಿತ ದೇಶವಾದ ಅಮೆರಿಕದಲ್ಲಿ ಸಾವಿನ ಸಂಖ್ಯೆ 2,00,000 ದಾಟಿದೆ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್‌ಎಸ್‌ಇ)ನ ಮಾಹಿತಿ ವರದಿ ತಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾಷಿಂಗ್ಟನ್: ಕೊರೋನಾವೈರಸ್ ಸೋಂಕಿನಿಂದ ವಿಶ್ವದಲ್ಲೇ ಅತಿಹೆಚ್ಚು ಬಾಧಿತ ದೇಶವಾದ ಅಮೆರಿಕದಲ್ಲಿ ಸಾವಿನ ಸಂಖ್ಯೆ 2,00,000 ದಾಟಿದೆ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್‌ಎಸ್‌ಇ)ನ ಮಾಹಿತಿ ವರದಿ ತಿಳಿಸಿದೆ.

ದೇಶದಲ್ಲಿ ಇದುವರೆಗೆ 68 ಲಕ್ಷ ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 2,00,005ರಷ್ಟಿದೆ ಎಂದು ಸಿಎಸ್ಎಸ್ಇ ಮಾಹಿತಿ ತಿಳಿಸಿರುವುದಾಗಿ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ನ್ಯೂಯಾರ್ಕ್ ರಾಜ್ಯದಲ್ಲಿ 33,092 ಸಾವುಗಳು ವರದಿಯಾಗುವುದುರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿರುವ ನ್ಯೂಜೆರ್ಸಿ ರಾಜ್ಯದಲ್ಲಿ 16,069 ಸಾವುಗಳು ವರದಿಯಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com