ಅಫ್ಘಾನಿಸ್ತಾನದ 2ನೇ ಅತಿದೊಡ್ಡ ನಗರ ಕಂದಹಾರ್, ಲಷ್ಕರ್ ಗಹ್ ತಾಲಿಬಾನ್ ವಶಕ್ಕೆ!

ಅಫ್ಘಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್​ ಅನ್ನು ಕೂಡ ತಾಲಿಬಾನ್ ಪಡೆಗಳು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಕಾಬೂಲ್: ಅಫ್ಘಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್​ ಅನ್ನು ಕೂಡ ತಾಲಿಬಾನ್ ಪಡೆಗಳು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. 

ಅಫ್ಘಾನಿಸ್ತಾನದ 34 ಪ್ರಾಂತೀಯ ರಾಜಧಾನಿಗಳಲ್ಲಿ ಕಂದಹಾರ್ 12ನೇ ಪ್ರಾಂತೀಯ ರಾಜಧಾನಿಯಾಗಿದೆ. ಕಂದಹಾರ್'ನ್ನೂ ಕೂಡ ತಾಲಿಬಾನ್ ವಶಕ್ಕೆ ಪಡೆದುಕೊಂಡಿದ್ದು, ಈ ಮೂಲಕ ತಾಲಿಬಾನಿಗಳು ಅಫ್ಘಾನಿಸ್ತಾನದ ಬಹುಭಾಗವನ್ನು ಈಗಾಗಲೇ ಆವರಿಸಿದ್ದಾರೆಂದು ಹೇಳಲಾಗುತ್ತಿದೆ. 

ರಾಜಧಾನಿ ಮತ್ತು ಇತರ ಕೆಲವೇ ಭೂಭಾಗಗಳು ಸರ್ಕಾರದ ನಿಯಂತ್ರಣದಲ್ಲಿದ್ದು, ಉಳಿದಂತೆ ಹೆಚ್ಚಿನ ಭೂಭಾಗ ತಾಲಿಬಾನ್ ಉಗ್ರರ ವಶವಾಗಿವೆ. ಈ ಬೆನ್ನಲ್ಲೇ ಅಲ್ಲಿನ ಸರ್ಕಾರವ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಸಾಕಷ್ಟು ಹೆಣಗಾಡುತ್ತಿದೆ.

‘ಕಂದಹಾರ್‌ ಅನ್ನು ಸಂಪೂರ್ಣವಾಗಿ ವಶಕ್ಕೆ ತೆಗೆದುಕೊಂಡಿದ್ದೇವೆ. ಮುಜಾಹಿದೀನ್, ನಗರದ ಹುತಾತ್ಮರ ಚೌಕ ತಲುಪಿದೆ’ ಎಂದು ತಾಲಿಬಾನ್ ವಕ್ತಾರರು ಘೋಷಿಸಿದ್ದಾರೆ.

ಇತ್ತೀಚೆಗಷ್ಟೇ ಈಶಾನ್ಯ ಭಾಗದ ಬದಖ್‌ಷಾನ್‌ ಮತ್ತು ಪಶ್ಚಿಮ ಭಾಗದ ಬಘ್ಲಾನ್‌ ಹಾಗೂ ಫರಾಹ್‌ ಪ್ರಾಂತ್ಯಗಳ ರಾಜಧಾನಿಗಳನ್ನು ತಾಲಿಬಾನ್‌ ವಶಪಡಿಸಿಕೊಂಡಿತ್ತು. ಸದ್ಯ , ದೇಶದ ಮೂರನೇ ಎರಡರಷ್ಟು ಭಾಗ ತಾಲಿಬಾನ್‌ ನಿಯಂತ್ರಣದಲ್ಲಿದೆ ಎನ್ನಲಾಗಿದೆ.

ಒಟ್ಟು 34 ಪ್ರಾಂತೀಯ ರಾಜಧಾನಿಗಳಲ್ಲಿ 11 ರಾಜಧಾನಿಗಳನ್ನು ತಾಲಿಬಾನ್ ವಶಕ್ಕೆ ಪಡೆದುಕೊಂಡಿದ್ದು, ಹೆರಾತ್​ನಲ್ಲಿರುವ ಐತಿಹಾಸಿಕ ಮಸೀದಿ 'ಗ್ರೇಟ್ ಮಸೀದಿ' ಯನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಈ ಮಸೀದಿಯು ಕ್ರಿ.ಪೂ 500ನೇ ವರ್ಷಕ್ಕಿಂತ ಹಿಂದಿನದ್ದಾಗಿದ್ದು, ಅಲೆಕ್ಸಾಂಡರ್​ನಿಂದ ಹಾನಿಗೊಳಗಾಗಿತ್ತು .ಅಲ್ಲಿನ ಸರ್ಕಾರಿ ಕಟ್ಟಡಗಳೂ ತಾಲಿಬಾನಿಗಳಿಗೆ ವಶವಾಗಿವೆ. ಘಜ್ನಿಯ ಮೇಲೆ ತಾಲಿಬಾನಿ ಉಗ್ರರು ಹಿಡಿತ ಸಾಧಿಸಿದ್ದಾರೆ. ಇದರಿಂದಾಗಿ ಕಾಬೂಲ್ ಮತ್ತು ಇತರ ದಕ್ಷಿಣ ಪ್ರಾಂತ್ಯಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಕೂಡಾ ಅವರ ವಶವಾಗಿದೆ. ಈಗ ಅಫ್ಘನ್ ರಾಜಧಾನಿ ತಾಲಿಬಾನ್ ಮೇಲೆ ಸಾಕಷ್ಟು ಒತ್ತಡ ಬಿದ್ದಿದ್ದು, ಸರ್ಕಾರಿ ಪಡೆಗಳು ತಾಲಿಬಾನಿಗಳನ್ನು ಎದುರಿಸಲು ಸದಾ ಸಿದ್ಧವಾಗಿವೆ.

ತಾಲಿಬಾನಿಗಳು ಈಗ ದೇಶದ ಮೂರನೇ ಎರಡರಷ್ಟು ಭಾಗವನ್ನು ಹೊಂದಿದ್ದಾರೆಂದು ಅಂದಾಜಿಸಲಾಗಿದೆ ಮತ್ತು ಹಲವಾರು ಪ್ರಾಂತ್ಯಗಳಲ್ಲಿ ಸರ್ಕಾರಿ ಪಡೆಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. 

ತಾಲಿಬಾನ್​ನಿಂದ ಅಫ್ಘನ್ ಸರ್ಕಾರ ಮರುವಶಕ್ಕೆ ಪಡೆದುಕೊಂಡ ನಗರಗಳೂ ಮತ್ತೆ ತಾಲಿಬಾನಿಗಳ ವಶವಾಗಿವೆ. ಈ ಬೆಳವಣಿಗೆ ಅಲ್ಲಿನ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com