ಅಫ್ಗಾನಿಸ್ತಾನದಲ್ಲಿ ಉಗ್ರರ ಅಟ್ಟಹಾಸ: ಮತ್ತೆ ನಾಲ್ಕು ನಗರಗಳು ತಾಲಿಬಾನ್ ವಶಕ್ಕೆ!

ಅಫ್ಗಾನಿಸ್ತಾನದ ದಕ್ಷಿಣ ಭಾಗವನ್ನು ದಾಟಿ ಮತ್ತೆ ನಾಲ್ಕು ಪ್ರಮುಖ ನಗರಗಳನ್ನು ತಾಲಿಬಾನ್‌ ಶುಕ್ರವಾರ ವಶಪಡಿಸಿಕೊಂಡಿದೆ. ಆ ಮೂಲಕ ಅಫ್ಗಾನಿಸ್ತಾನದ ಶೇ 75 ಭಾಗದ ಮೇಲೆ ತಾಲಿಬಾನ್‌ ಹಿಡಿತ ಸಾಧಿಸಿದಂತಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಾಬೂಲ್‌: ಅಫ್ಗಾನಿಸ್ತಾನದ ದಕ್ಷಿಣ ಭಾಗವನ್ನು ದಾಟಿ ಮತ್ತೆ ನಾಲ್ಕು ಪ್ರಮುಖ ನಗರಗಳನ್ನು ತಾಲಿಬಾನ್‌ ಶುಕ್ರವಾರ ವಶಪಡಿಸಿಕೊಂಡಿದೆ. ಆ ಮೂಲಕ ಅಫ್ಗಾನಿಸ್ತಾನದ ಶೇ 75 ಭಾಗದ ಮೇಲೆ ತಾಲಿಬಾನ್‌ ಹಿಡಿತ ಸಾಧಿಸಿದಂತಾಗಿದೆ.

ಎರಡು ದಶಕಗಳ ಅವಧಿಯಲ್ಲಿ ಅಮೆರಿಕ, ಬ್ರಿಟನ್ ಮತ್ತು ನ್ಯಾಟೋ ಪಡೆಗಳು ಅತಿಹೆಚ್ಚು ದಾಳಿಗಳನ್ನು ನಡೆಸಿದ ಹೆಲ್ಮಾಂಡ್ ಪ್ರಾಂತವನ್ನು ಬಂಡುಕೋರರು ವಶಪಡಿಸಿಕೊಂಡಿದ್ದಾರೆ. ಇದು ಕಾಬೂಲ್'ಗೆ ಸನಿಹದಲ್ಲಿದೆ. ಜೊತೆಗೆ ಜಬುಲ್ ಹಾಗೂ ಉರುಜ್ಗಲ್ ಎಂಬ ಇನ್ನೆರಡು ಪ್ರಾಂತಗಳನ್ನೂ ವಶಪಡಿಸಿಕೊಂಡಿದ್ದಾರೆ. 

ಬಹುತೇಕ ಈಗ ತಾಲಿಬಾನಿಗಳು ರಾಜಧಾನಿ ಕಾಬೂಲ್'ನ್ನೂ ಸುತ್ತುವರೆದಂತಾಗಿದ್ದು, ರಾಜಧಾನಿ ರಕ್ಷಣೆಗೆ ಆಫ್ಘಾನಿಸ್ತಾನ ಸರ್ಕಾರ ಹೋರಾಡುತ್ತಿದೆ. ತಾಲಿಬಾನ್ ಉಗ್ರರು ಕಂದಹಾರ್‌ ವಶಪಡಿಸಿಕೊಂಡಿರುವ ಬಗ್ಗೆ ನಿನ್ನೆ ಬೆಳಿಗ್ಗೆ ವರದಿಯಾಗಿತ್ತು.

ತಾಲಿಬಾನ್‌ ಇತ್ತೀಚಿನ ದಿನಗಳಲ್ಲಿ ತನ್ನ ಪ್ರಾಬಲ್ಯವನ್ನು ತೀವ್ರ ಗತಿಯಲ್ಲಿ ಸಾಧಿಸುತ್ತಿರುವುದು ಅಫ್ಗಾನಿಸ್ತಾನದ ಸರ್ಕಾರವನ್ನು ಚಿಂತೆಗೀಡು ಮಾಡಿದೆ.

ಹಲವೆಡೆ ಯುದ್ಧದ ಸ್ಥಳಗಳಿಂದ ವಿಶೇಷ ಕಾರ್ಯಾಚರಣೆ ಪಡೆಗಳೇ ಪಲಾಯನಗೈದಿವೆ. ಅಪಾರ ವೆಚ್ಚ ಮಾಡಿ ತರಬೇತಿ ಪಡೆದಿದ್ದರೂ ಸೇನಾ ಪಡೆಗಳು ಯುದ್ಧ ಭೂಮಿಯಿಂದ ಓಡಿ ಹೋಗುತ್ತಿರುವುದು ಏಕೆ ಎನ್ನುವ ಪ್ರಶ್ನೆ ಸರ್ಕಾರವನ್ನು ಕಾಡುತ್ತಿದೆ. ಲವೆಡೆ ಸಂಭವಿಸಿರುವ ಹಿಂಸಾಚಾರದಿಂದಾಗಿ ಸಾವಿರಾರು ಮಂದಿ ಕಾಬೂಲ್‌ನಲ್ಲಿ ಆಶ್ರಯ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com