ಸಾಂದರ್ಭಿಕ ಚಿತ್ರ
ವಿದೇಶ
ಅಮೆರಿಕದಲ್ಲಿ ನೂರು ವರ್ಷಗಳಲ್ಲೇ ಅತಿ ಹೆಚ್ಚು ಮಳೆ, 22 ಸಾವು
ಭಾರಿ ಮಳೆಯಿಂದಾಗಿ ಅಮೆರಿಕಾದ ಕೆಲ ಪ್ರದೇಶಗಳು ತತ್ತರಿಸಿ ಹೋಗಿದ್ದು, ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಈವರೆಗೆ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ವಾಷಿಂಗ್ಟನ್: ಭಾರಿ ಮಳೆಯಿಂದಾಗಿ ಅಮೆರಿಕಾದ ಕೆಲ ಪ್ರದೇಶಗಳು ತತ್ತರಿಸಿ ಹೋಗಿದ್ದು, ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಈವರೆಗೆ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಇನ್ನೂ ಪ್ರವಾಹದಲ್ಲಿ ನೂರಾರು ಕಾರುಗಳು ವಾಹನಗಳು ಕೊಚ್ಚಿ ಹೋಗಿವೆ. ಹಲವು ಮಂದಿ ಕಾಣೆಯಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಳೆದ ನೂರು ವರ್ಷಗಳಲ್ಲಿ ಅಮೆರಿಕ ಕಂಡ ಅತಿ ಹೆಚ್ಚು ಮಳೆ ಇದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟೆನ್ನೆಸ್ಸೀಯ ಹಂಫ್ರೆ ಕೌಂಟಿಯಲ್ಲಿ ಕಳೆದ 24 ಗಂಟೆಗಳಲ್ಲಿ 43 ಇಂಚುಗಳಷ್ಟು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ