ಕಾಬೂಲ್ ಬಾಂಬ್ ದಾಳಿಯ ಹಿಂದೆ ಐಎಸ್ ಕೈವಾಡ: ಅಮೆರಿಕ ಅಧಿಕಾರಿ

ಕಾಬೂಲ್ ವಿಮಾನ ನಿಲ್ದಾಣದ ಸಂಕೀರ್ಣದಲ್ಲಿ ನಡೆದ ಅವಳಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಇಸ್ಲಾಮಿಕ್ ಸ್ಟೇಟ್ ನ ಕೈವಾಡವಿರುವ ಸಾಧ್ಯತೆ ಖಂಡಿತವಾಗಿಯೂ ಇದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇಸ್ಲಾಮಿಕ್ ಸ್ಟೇಟ್ (ಸಂಗ್ರಹ ಚಿತ್ರ)
ಇಸ್ಲಾಮಿಕ್ ಸ್ಟೇಟ್ (ಸಂಗ್ರಹ ಚಿತ್ರ)

ವಾಷಿಂಗ್ ಟನ್: ಕಾಬೂಲ್ ವಿಮಾನ ನಿಲ್ದಾಣದ ಸಂಕೀರ್ಣದಲ್ಲಿ ನಡೆದ ಅವಳಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಇಸ್ಲಾಮಿಕ್ ಸ್ಟೇಟ್ ನ ಕೈವಾಡವಿರುವ ಸಾಧ್ಯತೆ ಖಂಡಿತವಾಗಿಯೂ ಇದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಗುರುವಾರ ನಡೆದ ದಾಳಿಯಲ್ಲಿ ಅಮೆರಿಕದ ಸೇನೆಯ ಸಿಬ್ಬಂದಿಗಳಿಗೂ ಗಾಯಗಳಾಗಿದೆ. ಅಫ್ಘಾನಿಸ್ತಾನದಿಂದ ಅಮೆರಿಕ ಸೇನೆ ಹಿಂತೆಗೆತಕ್ಕೆ ಆ.31 ವರೆಗೂ ಗಡುವು ವಿಧಿಸಲಾಗಿದೆ. ಗಡುವು ವಿಸ್ತರಣೆ ಮಾಡಲು ಯತ್ನಿಸಿದರೆ ಅದರ ಪರಿಣಾಮವನ್ನು ಅಮೆರಿಕ ಎದುರಿಸಬೇಕಾಗುತ್ತದೆ ಎಂದು ತಾಲೀಬಾನ್ ಎಚ್ಚರಿಕೆ ನೀಡಿತ್ತು. ಆದರೆ ಇದಕ್ಕೂ ಮುನ್ನ ಆ.26 ರಂದು ಕಾಬೂಲ್ ನಲ್ಲಿ ಅವಳಿ ಆತ್ಮಹತ್ಯಾ ಬಾಂಬ್ ಸ್ಫೋಟ ನಡೆದಿದೆ.

ತಾಲೀಬಾನ್ ಗಿಂತಲೂ ಇಸ್ಲಾಮಿಕ್ ಸ್ಟೇಟ್ ಉಗ್ರವಾಗಿದ್ದು, ನಾಗರಿಕರನ್ನು ಟಾರ್ಗೆಟ್ ಮಾಡಿ ಈ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಅಮೆರಿಕ ಹೇಳಿದೆ.

ಅಫ್ಘಾನಿಸ್ತಾನ ತಾಲೀಬಾನ್ ವಶವಾದ ನಂತರ ಕಾಬೂಲ್ ವಿಮಾನ ನಿಲ್ದಾಣದ ಮೂಲಕ ಬೃಹತ್ ಪ್ರಮಾಣದಲ್ಲಿ ದೇಶಗಳು ತಮ್ಮ ತಮ್ಮ ನಾಗರಿಕರನ್ನು ರಾಯಭಾರಿ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳುವ ಭಾಗವಾಗಿರುವ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com