ಕಾಬೂಲ್ ಭಯೋತ್ಪಾದನಾ ದಾಳಿ ಪ್ರಕರಣ: ಮೃತರ ಸಂಖ್ಯೆ 103ಕ್ಕೆ ಏರಿಕೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ನಡೆದ ಸರಣಿ ಭಯೋತ್ಪಾದಕ ದಾಳಿಯಲ್ಲಿ ಮೃತರಾದವರ ಸಂಖ್ಯೆ 103ಕ್ಕೆ ಏರಿಕೆಯಾಗಿದೆ. ಈ ಕುರಿತು ಶುಕ್ರವಾರ ಮಾಧ್ಯಮಗಳು ವರದಿ ಮಾಡಿವೆ.
ರಕ್ಷಣಾ ಕಾರ್ಯಾಚರಣೆಯ ಚಿತ್ರ
ರಕ್ಷಣಾ ಕಾರ್ಯಾಚರಣೆಯ ಚಿತ್ರ

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ನಡೆದ ಸರಣಿ ಭಯೋತ್ಪಾದಕ ದಾಳಿಯಲ್ಲಿ ಮೃತರಾದವರ ಸಂಖ್ಯೆ 103ಕ್ಕೆ ಏರಿಕೆಯಾಗಿದೆ. ಈ ಕುರಿತು ಶುಕ್ರವಾರ ಮಾಧ್ಯಮಗಳು ವರದಿ ಮಾಡಿವೆ. ಸ್ಫೋಟಗಳು ಕನಿಷ್ಠ 90 ಅಫ್ಘಾನ್ ನಾಗರಿಕರನ್ನು ಬಲಿ ತೆಗೆದುಕೊಂಡಿವೆ ಎಂದು ದಿ ವಾಲ್ ಸ್ಟ್ರೀಟ್ ಜರ್ನಲ್ ತಿಳಿಸಿದೆ.

ಪೆಂಟಗನ್ ಈ ಹಿಂದೆ 13 ಸೈನಿಕರ ಸಾವನ್ನು ದೃಢಪಡಿಸಿದೆ. ಕಾಬೂಲ್ ವಿಮಾನ ನಿಲ್ದಾಣ ಮತ್ತು ಅದರ ಹೊರವಲಯವನ್ನು ಗುರಿಯಾಗಿಸಿಕೊಂಡು ಗುರುವಾರ, ಕನಿಷ್ಠ ನಾಲ್ಕು ಸ್ಫೋಟಗಳು ನಡೆದವು. ಇಸ್ಲಾಮಿಕ್ ಸ್ಟೇಟ್-ಖೋರಾಸನ್ ಭಯೋತ್ಪಾದಕ ಗುಂಪು ಈ ದಾಳಿಯ ಹೊಣೆ ಹೊತ್ತಿದೆ ಎಂದು ವರದಿಯಾಗಿದೆ.

ದಾಳಿ ನಂತರ ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್  ಐಎಸ್ ನ ಈ ದಾಳಿಗೆ ಜಯವಿಲ್ಲ. ಅಮೆರಿಕದ ಜನರನ್ನು ನಾವು ರಕ್ಷಿಸುತ್ತೇವೆ,  ನಮ್ಮ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ದಾಳಿ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಲ್ಲಿ ಹೆಚ್ಚುವರಿ ಮಿಲಿಟರಿ ನಿಯೋಜನೆ ಕುರಿತಂತೆ ಪ್ರತಿಕ್ರಿಯಿಸಿದ ಜೋ ಬೈಡನ್, ಒಂದು ವೇಳೆ ಹೆಚ್ಚುವರಿ ಮಿಲಿಟರಿ ಪಡೆ ಅಗತ್ಯವಾದರೆ ಅದಕ್ಕೆ ಅನುಮೋದನೆ ನೀಡುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com