ಆಸ್ಟ್ರೇಲಿಯಾದಲ್ಲಿ ಕೋವಿಡ್ ಸೋಂಕು ಉಲ್ಪಣ; ಸಿಡ್ನಿ ಬೆನ್ನಲ್ಲೇ ಮೆಲ್ಬರ್ನ್ ನಲ್ಲೂ ಲಾಕ್ ಡೌನ್ ಜಾರಿ!

ಆಸ್ಟ್ರೇಲಿಯಾದಲ್ಲಿ ಕೋವಿಡ್ ಸೋಂಕು ಉಲ್ಪಣ; ಸಿಡ್ನಿ ಬೆನ್ನಲ್ಲೇ ಮೆಲ್ಬರ್ನ್ ನಲ್ಲೂ ಲಾಕ್ ಡೌನ್ ಜಾರಿ!

ಆಸ್ಟ್ರೇಲಿಯಾದಲ್ಲಿ ಕೋವಿಡ್-19 ಸೋಂಕು ಗಣನೀಯವಾಗಿ ಉಲ್ಪಣವಾಗಿದ್ದು, ಸಿಡ್ನಿ ಬೆನ್ನಲ್ಲೇ ಮೆಲ್ಬರ್ನ್ ನಗರದಲ್ಲೂ ನಲ್ಲೂ ಲಾಕ್ ಡೌನ್ ಜಾರಿ ಮಾಡಲಾಗಿದೆ.

ಮೆಲ್ಬರ್ನ್: ಆಸ್ಟ್ರೇಲಿಯಾದಲ್ಲಿ ಕೋವಿಡ್-19 ಸೋಂಕು ಗಣನೀಯವಾಗಿ ಉಲ್ಪಣವಾಗಿದ್ದು, ಸಿಡ್ನಿ ಬೆನ್ನಲ್ಲೇ ಮೆಲ್ಬರ್ನ್ ನಗರದಲ್ಲೂ ನಲ್ಲೂ ಲಾಕ್ ಡೌನ್ ಜಾರಿ ಮಾಡಲಾಗಿದೆ.

ಹೌದು.. ಮತ್ತೆ ಆಸ್ಟ್ರೇಲಿಯಾದಲ್ಲಿ ಗಣನೀಯ ಪ್ರಮಾಣದಲ್ಲಿ ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಪರಿಣಾಮ ಕ್ರಮೇಣ ಆಸ್ಟ್ರೇಲಿಯಾ ಲಾಕ್ ಡೌನ್ ಮುಷ್ಟಿಗೆ ಸಿಲುಕುತ್ತಿದೆ. ಕೋವಿಡ್-19ರ ಡೆಲ್ಟಾ ರೂಪಾಂತರ ತಳಿಯು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆಸ್ಟ್ರೇಲಿಯಾದಲ್ಲಿ 31,400 ಸೋಂಕು  ಪ್ರಕರಣಗಳು ದಾಖಲಾಗಿದ್ದು, 912 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಹೀಗಾಗಿ ಈಗಾಗಲೇ ಸಿಡ್ನಿಯಲ್ಲಿ ಲಾಕ್ ಡೌನ್ ಹೇರಲಾಗಿದ್ದು, ಇದರ ಬೆನ್ನಲ್ಲೇ ಮೆಲ್ಬರ್ನ್ ನಗರದಲ್ಲೂ ಕೂಡ ಲಾಕ್ಡೌನ್ ಜಾರಿ ಮಾಡಲಾಗಿದೆ. ಮೆಲ್ಬರ್ನ್ ನಗರದ ಸುಮಾರು 1.2 ಕೋಟಿ ಜನರಿಗೆ ಮನೆ ಬಿಟ್ಟು ಹೊರಬರದಂತೆ ಆದೇಶ  ಹೊರಡಿಸಲಾಗಿದೆ. 

ಇನ್ನು ವಿಕ್ಟೋರಿಯಾದಲ್ಲಿ ಕೂಡ 18 ಸೋಂಕು ಪ್ರಕರಣ ದೃಢಪಟ್ಟ ಬೆನ್ನಲ್ಲೇ ಲಾಕ್‌ ಡೌನ್ ಘೋಷಿಸುವ ಕಠಿಣ ನಿರ್ಧಾರ ಕೈಗೊಂಡಿದ್ದೇವೆ. ಹೆಚ್ಚು ಕಾಯದೇ ಈಗಲೇ ಲಾಕ್ಡೌನ್ ಹೇರುವುದು ಸೂಕ್ತ. ಇದರಿಂದ ಸೋಂಕು ಹರಡುವುದನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ಡ್ಯಾನ್ ಆಂಡ್ರೂಸ್ ತಿಳಿಸಿದ್ದಾರೆ.

ನ್ಯೂಸೌತ್ ವೇಲ್ಸ್ ನಲ್ಲಿ ಈವರೆಗೂ 900ಕ್ಕೂ ಹೆಚ್ಚು ಮಂದಿ ಸೋಂಕಿಗೆ ತುತ್ತಾಗಿದ್ದಾರೆ. 73 ಮಂದಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, 19 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ.

ಸಿಡ್ನಿಯಲ್ಲಿ ನಾಲ್ಕನೇ ವಾರಕ್ಕೆ ಕಾಲಿಟ್ಟ ಲಾಕ್ಡೌನ್
ಆಸ್ಟ್ರೇಲಿಯಾದ ಅತಿ ದೊಡ್ಡ ನಗರ ಸಿಡ್ನಿಯಲ್ಲಿ ಲಾಕ್‌ಡೌನ್ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಕಳೆದ 24 ಗಂಟೆಗಳಲ್ಲಿ ಸಿಡ್ನಿಯಲ್ಲಿ 65 ಹೊಸ ಪ್ರಕರಣಗಳು ದಾಖಲಾಗಿವೆ. ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಲಾಕ್‌ಡೌನ್ ಮುಂದಿನ ಎರಡು  ವಾರಗಳವರೆಗೂ ಮುಂದುವರಿಸುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ. 

ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವುದರಲ್ಲಿ ಆಸ್ಟ್ರೇಲಿಯಾ ಹೆಚ್ಚು ಮೆಚ್ಚುಗೆಗೆ ಪಾತ್ರವಾಗಿದ್ದು, 'ಕೋವಿಡ್ ಶೂನ್ಯ ನೀತಿ'ಯನ್ನು ಅತ್ಯಂತ ಪರಿಣಾಮಕಾರಿಯಾಗಿ ಆಳವಡಿಸಿಕೊಂಡಿದೆ.
 

Related Stories

No stories found.

Advertisement

X
Kannada Prabha
www.kannadaprabha.com