ಚೋಕ್ಸಿಯನ್ನು ಡೊಮಿನಿಕಾದಿಂದ ನೇರವಾಗಿ ಭಾರತಕ್ಕೆ ವಾಪಸ್ ಕಳಿಸಲು ಆಂಟಿಗುವಾ-ಬಾರ್ಬುಡಾ ಆದ್ಯತೆ: ವರದಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಿಂದ ನೇರವಾಗಿ ಭಾರತಕ್ಕೆ ವಾಪಸ್ ಕಳುಹಿಸಲು ಆಂಟಿಗುವಾ ಮತ್ತು ಬಾರ್ಬುಡಾ ಆದ್ಯತೆ ನೀಡಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಮೆಹುಲ್ ಚೋಕ್ಸಿ
ಮೆಹುಲ್ ಚೋಕ್ಸಿ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಿಂದ ನೇರವಾಗಿ ಭಾರತಕ್ಕೆ ವಾಪಸ್ ಕಳುಹಿಸಲು ಆಂಟಿಗುವಾ ಮತ್ತು ಬಾರ್ಬುಡಾ ಆದ್ಯತೆ ನೀಡಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಕೆರಿಬಿಯನ್ ದ್ವೀಪ ದೇಶದ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ ಎಂದು ಮಾಧ್ಯಮಗಳು ಪ್ರಕಟಿಸಿವೆ. ಚೋಕ್ಸಿಯಿಂದಾಗಿ ಇದೀಗ ಡೊಮಿನಿಕಾಗೆ 'ಸಮಸ್ಯೆ'ಯಾಗಿದೆ. ಮತ್ತೆ ಅವರನ್ನು ಆಂಟಿಗುವಾ ಮತ್ತು ಬಾರ್ಬುಡಾಕ್ಕೆ ಕಳುಹಿಸಿದರೆ ಅಲ್ಲಿಯೂ ಸಮಸ್ಯೆ ಶುರುವಾಗುತ್ತದೆ. ಹೀಗಾಗಿ ಪ್ರಧಾನಿ ಗ್ಯಾಸ್ಟನ್ ಬ್ರೌನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲ ಮಂತ್ರಿಗಳು ದೈಹಿಕವಾಗಿ ಮತ್ತು ವಾಸ್ತವಿಕವಾಗಿ ಹಾಜರಿದ್ದರು. ಎಲ್ಲರೂ ಒಮ್ಮತದ ಒಪ್ಪಿಗೆ ನೀಡಿದ್ದಾರೆ ಎಂದು ವರದಿಯಾಗಿದೆ. 

ಆಂಟಿಗುವಾ ಮತ್ತು ಬಾರ್ಬುಡಾದ ಕ್ಯಾಬಿನೆಟ್ನ ಆದ್ಯತೆಯೆಂದರೆ ಚೋಕ್ಸಿಯನ್ನು ಡೊಮಿನಿಕಾದಿಂದ ಭಾರತಕ್ಕೆ ವಾಪಸ್ ಕಳುಹಿಸುವುದು ಎಂದಾಗಿದೆ. ಚೋಕ್ಸಿ ಮೇ 23ರಂದು ಆಂಟಿಗುವಾ ಮತ್ತು ಬಾರ್ಬುಡಾದಿಂದ ನಿಗೂಢವಾಗಿ ನಾಪತ್ತೆಯಾಗಿದ್ದರು.

 ನಂತರ ಅಕ್ರಮ ಪ್ರವೇಶಕ್ಕಾಗಿ ನೆರೆಯ ದ್ವೀಪ ದೇಶ ಡೊಮಿನಿಕಾದಲ್ಲಿ ಚೋಕ್ಸಿಯನ್ನು ಬಂಧಿಸಲಾಗಿತ್ತು. ಆಂಟಿಗುವಾದಿಂದ ಡೊಮಿನಿಕಾಕ್ಕೆ ಅಕ್ರಮವಾಗಿ ನುಸುಳಿರುವ ಬಗ್ಗೆ ಡೊಮಿನಿಕಾ ಕೋರ್ಟ್​​ನಲ್ಲಿ ಬುಧವಾರ ವಿಚಾರಣೆ ನಡೆದು ಈ ಪ್ರಕರಣ ಸಂಬಂಧ ಅವರಿಗೆ ಜಾಮೀನು ನಿರಾಕರಿಸಲಾಗಿದೆ. 

ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‌ಬಿ)ನಲ್ಲಿ ನಡೆದಿದ್ದ 13,500 ಕೋಟಿ ರೂ.ಗಳ ಹಗರಣವು ಭಾರತೀಯ ಬ್ಯಾಂಕಿಂಗ್ ಉದ್ಯಮವನ್ನು ಬೆಚ್ಚಿಬೀಳಿಸುವ ಮೊದಲು ಮೆಹುಲ್ ಚೋಕ್ಸಿ ಮತ್ತು ಅವರ ಸೋದರಳಿಯ ನೀರವ್ ಮೋದಿ 2018ರ ಜನವರಿ ಮೊದಲ ವಾರದಲ್ಲಿ ಭಾರತದಿಂದ ಪರಾರಿಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com