ಕೊರೋನಾ ಮಧ್ಯೆ ಪಾಕಿಸ್ತಾನಕ್ಕೆ ಮತ್ತೊಂದು ಹೊಡೆತ: ಎಫ್ಎಟಿಎಫ್ ನ ಗ್ರೇ ಪಟ್ಟಿಯಲ್ಲೇ ಉಳಿದ ಪಾಕ್!

ಭಯೋತ್ಪಾದಕ ಹಣಕಾಸು ವ್ಯವಸ್ಥೆ ಕುರಿತಂತೆ ಯಾವುದೇ ಕ್ರಮಕೈಗೊಳ್ಳುವಲ್ಲಿ ವಿಫಲವಾಗಿದ್ದರಿಂದ ಪಾಕಿಸ್ತಾನ ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‌ಎಟಿಎಫ್) 'ಬೂದು ಪಟ್ಟಿಯಲ್ಲಿ' ಉಳಿದುಕೊಂಡಿದೆ.
ಇಮ್ರಾನ್ ಖಾನ್
ಇಮ್ರಾನ್ ಖಾನ್

ನವದೆಹಲಿ: ಭಯೋತ್ಪಾದಕ ಹಣಕಾಸು ವ್ಯವಸ್ಥೆ ಕುರಿತಂತೆ ಯಾವುದೇ ಕ್ರಮಕೈಗೊಳ್ಳುವಲ್ಲಿ ವಿಫಲವಾಗಿದ್ದರಿಂದ ಪಾಕಿಸ್ತಾನ ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‌ಎಟಿಎಫ್) 'ಬೂದು ಪಟ್ಟಿಯಲ್ಲಿ' ಉಳಿದುಕೊಂಡಿದೆ.  

ಇನ್ನು ವಿಶ್ವಸಂಸ್ಥೆ ಗೊತ್ತುಪಡಿಸಿದ ಭಯೋತ್ಪಾದಕ ಸಂಘಟನೆಗಳ ಮುಖ್ಯಸ್ಥರು ಮತ್ತು ಕಮಾಂಡರ್‌ಗಳನ್ನು ತನಿಖೆ ಮಾಡಿ ಕಾನೂನು ಕ್ರಮ ಜರುಗಿಸಲು ಎಫ್‌ಎಟಿಎಫ್ ಇಸ್ಲಾಮಾಬಾದ್‌ಗೆ ಸೂಚಿಸಿದೆ. ಹಫೀಜ್ ಸಯೀದ್ ಮತ್ತು ಮಸೂದ್ ಅಜರ್ ಸೇರಿದಂತೆ ಮನಿ ಲಾಂಡರಿಂಗ್ ಮತ್ತು ಭಯೋತ್ಪಾದನೆಗೆ ಹಣಕಾಸು ನೆರವು ವಿರುದ್ಧದ ಕಠಿಣ ಕ್ರಮಕೈಗೊಳ್ಳುವಂತೆ ಸೂಚಿಸಿದೆ. 

ವರ್ಚುವಲ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಫ್‌ಎಟಿಎಫ್ ಅಧ್ಯಕ್ಷ ಮಾರ್ಕಸ್ ಪ್ಲೈಯರ್, ಮನಿ ಲ್ಯಾಂಡರಿಗೆ ಅಪಾಯಗಳನ್ನು ಪರಿಶೀಲಿಸುವಲ್ಲಿ ಪಾಕಿಸ್ತಾನ ಸರ್ಕಾರ ವಿಫಲವಾಗಿದೆ. ಇದು ಭ್ರಷ್ಟಾಚಾರ ಮತ್ತು ಭಯೋತ್ಪಾದನೆಗೆ ಹಣಕಾಸು ನೆರವಿಗೆ ಕಾರಣವಾಗಿದೆ. ಹೀಗಾಗಿ ಪಾಕಿಸ್ತಾನವು 'ಹೆಚ್ಚಿದ ಮೇಲ್ವಿಚಾರಣಾ ಪಟ್ಟಿಯಲ್ಲಿ' ಮುಂದುವರಿಯುತ್ತದೆ ಎಂದು ಎಫ್ಎಟಿಎಫ್ ಅಧ್ಯಕ್ಷರು ಹೇಳಿದರು.

2018 ರಲ್ಲಿ ನೀಡಲಾದ 27 ಕ್ರಿಯಾಶೀಲ ವಸ್ತುಗಳ ಪೈಕಿ 26 ಅನ್ನು ಪಾಕಿಸ್ತಾನ ಈಗ ಪೂರ್ಣಗೊಳಿಸಿದೆ. ಆದರೆ ವಿಶ್ವಸಂಸ್ಥೆ ಗೊತ್ತುಪಡಿಸಿದ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಫ್‌ಎಟಿಎಫ್ ಪಾಕಿಸ್ತಾನವನ್ನು ಕೇಳಿದೆ. ವಿಶ್ವಸಂಸ್ಥೆ ಗೊತ್ತುಪಡಿಸಿರುವ ಭಯೋತ್ಪಾದಕರನ್ನು ಜೈಶ್-ಎ-ಮೊಹಮ್ಮದ್(ಜೆಎಂ) ಮುಖ್ಯಸ್ಥ ಅಜರ್, ಲಷ್ಕರ್-ಎ-ತೈಬಾ(ಎಲ್‌ಇಟಿ) ಸಂಸ್ಥಾಪಕ ಸಯೀದ್ ಮತ್ತು ಅದರ 'ಕಾರ್ಯಾಚರಣಾ ಕಮಾಂಡರ್' ಜಕಿಯೂರ್ ರೆಹಮಾನ್ ಲಖ್ವಿ ಸೇರಿದ್ದಾರೆ.

26/11 ಮುಂಬೈ ಭಯೋತ್ಪಾದಕ ದಾಳಿ ಮತ್ತು 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್ಪಿಎಫ್ ಬಸ್ ಮೇಲೆ ಬಾಂಬ್ ದಾಳಿ ಸೇರಿದಂತೆ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಅಜರ್, ಸಯೀದ್ ಮತ್ತು ಲಖ್ವಿ ಭಾರತದಲ್ಲಿ ಮೋಸ್ಟ್ ವಾಂಟೆಡ್ ಭಯೋತ್ಪಾದಕರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com