ಹೆಚ್ಚಿದ ಕೊರೋನಾ ಸೋಂಕು: ಭಾರತದಿಂದ ಪ್ರಯಾಣ ನಿರ್ಬಂಧಿಸಿದ ಅಮೆರಿಕಾ

ರಾಷ್ಟ್ರದಲ್ಲಿ ಕೋವಿಡ್‌ ಪ್ರಕರಣಗಳ ಭಾರೀ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಮರಿಕಾಕ್ಕೆ ಭಾರತದಿಂದ ಪ್ರಯಾಣ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಬೈಡನ್‌ ಸರ್ಕಾರ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ವಾಷಿಂಗ್ಟನ್: ರಾಷ್ಟ್ರದಲ್ಲಿ ಕೋವಿಡ್‌ ಪ್ರಕರಣಗಳ ಭಾರೀ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಮರಿಕಾಕ್ಕೆ ಭಾರತದಿಂದ ಪ್ರಯಾಣ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಬೈಡನ್‌ ಸರ್ಕಾರ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.

ಸರ್ಕಾರಿ ರೋಗ ನಿಯಂತ್ರಣ ಸಂಸ್ಥೆಗಳ ಸಲಹೆಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ತಿಳಿಸಿದ್ದಾರೆ.

ಈ ನಿಯಮ ಅಮೆರಿಕನ್ ನಾಗರಿಕರು, ಶಾಶ್ವತ ನಿವಾಸಿಗಳು ಅಥವಾ ಇತರ ವಿನಾಯಿತಿ ಪಡೆದವರಿಗೆ ಅನ್ವಯಿಸುವುದಿಲ್ಲ. ಈ ನಿಯಮ ಮೇ.4 ರಿಂದ ಜಾರಿಯಾಗಲಿದೆ ಎಂದು ಜೆನ್ ಸಾಕಿ ಮಾಹಿತಿ ನೀಡಿದ್ದಾರೆ.

ಭಾರತದಲ್ಲಿ ಶನಿವಾರ ಒಂದೇ ದಿನ 4 ಲಕ್ಷಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಬರೋಬ್ಬರಿ 3523 ಮಂದಿ ಸಾವನ್ನಪ್ಪಿದ್ದಾರೆ. 

ಸೋಂಕು ತೀವ್ರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಕೆನಡಾ, ಯುಎಇ ಸೇರಿದಂತೆ ಹಲವು ದೇಶಗಳು ಭಾರತದ ಪ್ರಯಾಣವನ್ನು ತಾತ್ಕಾಲಿಕವಾಗಿ ನಿಷೇಧಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com