ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್

ಲಖಿಂಪುರದಲ್ಲಿ ರೈತರ ಹತ್ಯೆ ಖಂಡನೀಯ: ಅಮೆರಿಕದಲ್ಲಿ ನಿರ್ಮಲಾ ಸೀತರಾಮನ್

ಲಖಿಂಪುರದಲ್ಲಿ ನಾಲ್ವರು ರೈತರ ಸಾವಿಗೆ ಕಾರಣವಾದ ಹಿಂಸಾಚಾರ ಖಂಡನೀಯ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕಾದಲ್ಲಿ ಹೇಳಿದ್ದಾರೆ.
Published on

ಬೋಸ್ಟನ್: ಲಖಿಂಪುರದಲ್ಲಿ ನಾಲ್ವರು ರೈತರ ಸಾವಿಗೆ ಕಾರಣವಾದ ಹಿಂಸಾಚಾರ ಖಂಡನೀಯ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕಾದಲ್ಲಿ ಹೇಳಿದ್ದಾರೆ.

ಬಿಜೆಪಿ ಸರ್ಕಾರವಿರುವ ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂಬ ಕಾರಣಕ್ಕೆ ಅಷ್ಟೇ ಅಲ್ಲದೇ ದೇಶದ ಯಾವುದೇ ಭಾಗದಲ್ಲಿ ಈ ರೀತಿಯ ಘಟನೆಗಳು ನಡೆದರೂ ಅದರ ಬಗ್ಗೆ ಧ್ವನಿ ಎತ್ತಬೇಕು ಎಂದು ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.

ಅಮೆರಿಕೆಗೆ ಸರ್ಕಾರದ ಕೆಲಸದ ನಿಮಿತ್ತ ಭೇಟಿ ನೀಡಿರುವ ನಿರ್ಮಲಾ ಸೀತಾರಾಮನ್ ಬೋಸ್ಟನ್ ನಲ್ಲಿದ್ದು, ಹಾರ್ವರ್ಡ್ ಕೆನಡಿ ಸ್ಕೂಲ್ ನಲ್ಲಿ ನಡೆದ ಸಂವಾದಲ್ಲಿ ಮಾತನಾಡುತ್ತ ಈ ಹೇಳಿಕೆ ನೀಡಿದ್ದಾರೆ. ಸಂವಾದದಲ್ಲಿ ಲಖಿಂಪುರದ ಹಿಂಸಾಚಾರದ ಬಗ್ಗೆ ನಿರ್ಮಲಾ ಸೀತಾರಾಮನ್ ಅವರಿಗೆ ಪ್ರಶ್ನೆ ಕೇಳಲಾಗಿತ್ತು.

ಈ ಘಟನೆ ಬಗ್ಗೆ ಪ್ರಧಾನಿ ಹಾಗೂ ಹಿರಿಯ ಸಚಿವರು ಮೌನವೇಕೆ ವಹಿಸಿದ್ದಾರೆ?. ಪ್ರಧಾನಿ ಹಾಗೂ ಹಿರಿಯ ಸಚಿವರು ಏಕೆ ಈ ರೀತಿಯ ಘಟನೆಗಳ ಬಗ್ಗೆ ಒಂದೇ ಒಂದು ಮಾತನ್ನೂ ಆಡುತ್ತಿಲ್ಲ? ಇಂತಹ ಘಟನೆಗಳ ಬಗ್ಗೆ ಪ್ರಶ್ನಿಸಿದಾಗ ಏಕೆ ರಕ್ಷಣಾತ್ಮಕ ಪ್ರತಿಕ್ರಿಯೆ ಬರುತ್ತಿದೆ ಎಂಬುದೇ ಮೊದಲಾದ ಪ್ರಶ್ನೆಗಳನ್ನು ನಿರ್ಮಲಾ ಸೀತಾರಾಮನ್ ಅವರನ್ನು ಕೇಳಲಾಯಿತು.

"ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಲಖಿಂಪುರ ಖೇರಿ ಹಿಂಸಾಚಾರ ಘಟನೆ ಖಂಡನೀಯವಾದದ್ದು ನಮ್ಮಲ್ಲಿ ಪ್ರತಿಯೊಬ್ಬರೂ ಅದನ್ನೇ ಹೇಳುತ್ತಿದ್ದಾರೆ. ಹಾಗೆಯೇ ಬೇರೆ ಕಡೆಗಳಲ್ಲಿ ಇಂತಹ ಘಟನೆಗಳು ನಡೆದಾಗಲೂ ಅದು ಆತಂಕದ ವಿಷಯವೇ ಆಗಿರುತ್ತದೆ" ಎಂದು ಹೇಳಿದ್ದಾರೆ.

ಭಾರತದಲ್ಲಿ ಹಲವು ಭಾಗಗಳಲ್ಲಿ ಈ ರೀತಿಯ ಘಟನೆಗಳು ನಡೆದಿವೆ. ಅಮಾರ್ತ್ಯಸೇನ್ ಸೇರಿದಂತೆ ಭಾರತವನ್ನು ತಿಳಿದಿರುವ ನೀವೆಲ್ಲರೂ ಕೇವಲ ಬಿಜೆಪಿ ಸರ್ಕಾರವಿರುವ ಉತ್ತರ ಪ್ರದೇಶದಲ್ಲಿಯಷ್ಟೇ ಅಲ್ಲದೇ ಇತರ ಭಾಗಗಳಲ್ಲಿ ನಡೆದ ಕೃತ್ಯಗಳ ಬಗ್ಗೆ ಧ್ವನಿ ಎತ್ತಬೇಕೆಂದು ನಿರೀಕ್ಷಿಸುವೆ. ಈಗ ನನ್ನ ಸಂಪುಟ ಸಹೋದ್ಯೋಗಿಯ ಪುತ್ರ ಬಹುಶಃ ಸಮಸ್ಯೆಗೆ ಸಿಲುಕಿರಬಹುದು ಹಾಗೂ ಅದು ಅವರಲ್ಲದೇ ಬೇರೆ ಯಾರೂ ಮಾಡಿಲ್ಲದೇ ಇರಬಹುದು ಆದರೆ ಕಾನೂನಿನ ಪ್ರಕ್ರಿಯೆಗಳು ಪೂರ್ಣಗೊಂಡು ನೈಜತೆ ಸಾಬೀತಾಗಬೇಕು" ಎಂದು ಸೀತಾರಾಮನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com