
ಬೀಜಿಂಗ್: ಚೀನಾ ದೇಶದ ಅಖಂಡತೆ ಹಾಗೂ ಸಾರ್ವಭೌಮತ್ಯವನ್ನು ಕಾಪಾಡಿಕೊಳ್ಳುವ ಸಲುವಾಗಿ ಚೀನಾ ತಾನು ನೂತನ ಭೂ ಗಡಿ ಕಾನೂನನ್ನು ಜಾರಿಗೆ ತರುತ್ತಿರುವುದಾಗಿ ಘೋಷಿಐದೆ. ಚೀನಾ ಸಂಸತ್ತಿನಲ್ಲಿ ಈ ಕಾನೂನಿಗೆ ಒಪ್ಪಿಗೆ ದೊರೆತಿದ್ದು ಮುಂದಿನ ವರ್ಷ ಜನವರಿ1 ರಿಂದ ಅನುಷ್ಠಾನಕ್ಕೆ ಬರಲಿದೆ.
ಭಾರತದೊಂದಿಗೆ ಗಡಿ ಬಿಕ್ಕಟ್ಟನ್ನು ಹೊಂದಿರುವ ಚೀನಾ ನೂತನ ಕಾನೂನನ್ನು ತಂದಿರುವುದು ಭಾರತಕ್ಕೆ ಪರೋಕ್ಷ ಎಚ್ಚರಿಕೆಯಾಗಿದೆ ಎಂದು ರಾಜಕೀಯ ಪರಿಣತರು ಅಭಿಪ್ರಾಯಪಟ್ಟಿದ್ದಾರೆ.
ಚೀನಾ ಭೂಗಡಿಯಲ್ಲಿ ಯಾವುದೇ ರೀತಿಯಲ್ಲಿ ಉಲ್ಲಂಘನೆ ಕಂಡುಬಂದರೆ ಹಾಗೂ ತನ್ನ ದೇಶದ ಅಖಂಡತೆಗೆ ಧಕ್ಕೆ ಒದಗಿಬಂಡರೆ ತನ್ನ ರಕ್ಷಣೆಗೆ ಯಾವುದೇ ಕ್ರಮ ಕೈಗೊಳ್ಳಲು ಈ ಕಾನೂನು ಚೀನಾಗೆ ಅನುವು ಮಾಡಿಕೊಡಲಿದೆ.
ಈ ನೂತನ ಕಾನೂನಿನಲ್ಲಿ ಗಡಿ ಬಲವರ್ಧನೆ ಮಾತ್ರವಲ್ಲದೆ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಗಡಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ನಿರ್ಮಾಣ ಹಾಗೂ ಅಲ್ಲಿನ ಜನರ ಜೀವನ ಸದೃಢಗೊಳಿಸುವ ಕಾರ್ಯಕ್ರಮಗಳ ಕುರಿತಾಗಿ ಉಲ್ಲೇಖವಿದೆ.
ಚೀನಾ ಸೇನೆಯ ದಾಳಿಗೆ ಸಜ್ಜು: ಭಾರತೀಯ ಯೋಧರು ಗಡಿ ಬಳಿ ಯಾವ ರೀತಿ ತರಬೇತಿ ಪಡೆಯುತ್ತಿದ್ದಾರೆ ವಿಡಿಯೊ ನೋಡಿ!
ವರ್ಷದಲ್ಲಿ ಮೊದಲ ಬಾರಿಗೆ ವಿದೇಶ ಪ್ರವಾಸ ಕೈಗೊಂಡ ಜಾಕ್ ಮಾ: ಆಲಿ ಬಾಬಾ ಮೇಲೆ ಕೆಂಗಣ್ಣು ಬೀರಿದ್ದ ಚೀನಾ
ನೇಪಾಳಕ್ಕೆ 20 ಲಕ್ಷ ಡೋಸ್ ಕೊರೊನಾ ಲಸಿಕೆ ನೀಡಲಿರುವ ಚೀನಾ
ತಾಲೀಬಾನ್, ಚೀನಾ- ಪಾಕ್ ಕೃತ್ರಿಮ ಕೂಟದ ಕುರಿತು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಆತಂಕ
ಡೊಕ್ಲಾಮ್ ಸಂಘರ್ಷ ಇತಿಹಾಸದ ನಡುವೆ ಚೀನಾ-ಭೂತಾನ್ ಒಪ್ಪಂದಕ್ಕೆ ಸಹಿ; 'ಸೂಕ್ಷ್ಮವಾಗಿ ಗಮನಿಸಿದ್ದೇವೆ': ಭಾರತ
Advertisement