ಮುಲ್ಲಾ ಮೊಹಮ್ಮದ್ ಅಖುಂದ್‌ ತಾಲಿಬಾನ್‌ ಸರ್ಕಾರದ ಮುಖ್ಯಸ್ಥ, ಹೊಸ ಅಫ್ಘಾನ್ ಸಚಿವರ ಘೋಷಣೆ

ಅಫ್ಘಾನಿಸ್ತಾನದ ನೂತನ ತಾಲಿಬಾನ್ ಸರ್ಕಾರದ ಮುಖ್ಯಸ್ಥರನ್ನಾಗಿ ಮುಲ್ಲಾ ಮೊಹಮ್ಮದ್ ಹಸನ್  ಅಖುಂದ್‌ ಅವರನ್ನು ನೇಮಕ ಮಾಡಲಾಗಿದೆ.
ತಾಲಿಬಾನ್ ನಾಯಕರು
ತಾಲಿಬಾನ್ ನಾಯಕರು

ಕಾಬೂಲ್: ಅಫ್ಘಾನಿಸ್ತಾನದ ನೂತನ ತಾಲಿಬಾನ್ ಸರ್ಕಾರದ ಮುಖ್ಯಸ್ಥರನ್ನಾಗಿ ಮುಲ್ಲಾ ಮೊಹಮ್ಮದ್ ಹಸನ್  ಅಖುಂದ್‌ ಅವರನ್ನು ನೇಮಕ ಮಾಡಲಾಗಿದೆ ಎಂದು ಮಂಗಳವಾರ ತಾಲಿಬಾನ್ ಘೋಷಿಸಿದೆ.

ತಾಲಿಬಾನ್ ಸಹ ಸಂಸ್ಥಾಪಕ ಅಬ್ದುಲ್ ಘನಿ ಬರದಾರ್ ಅವರನ್ನು ಉಪ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ ಎಂದು ತಾಲಿಬಾನ್ ಮುಖ್ಯ ವಕ್ತಾರ ಜಬಿಹುಲ್ಲಾ ಮುಜಾಹಿದ್ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ತಾಲಿಬಾನ್ ಸಂಸ್ಥಾಪಕ ಮತ್ತು ದಿವಂಗತ ಸರ್ವೋಚ್ಚ ನಾಯಕ ಮುಲ್ಲಾ ಒಮರ್ ಅವರ ಪುತ್ರ ಮುಲ್ಲಾ ಯಾಕೂಬ್ ಅವರನ್ನು ರಕ್ಷಣಾ ಸಚಿವರನ್ನಾಗಿ ನೇಮಿಸಲಾಗಿದೆ. ಹಕ್ಕಾನಿ ನೆಟ್ವರ್ಕ್ ನಾಯಕ ಸಿರಾಜುದ್ದೀನ್ ಹಕ್ಕಾನಿಗೆ ಆಂತರಿಕ ಸಚಿವ ಸ್ಥಾನ ನೀಡಲಾಗಿದೆ ಎಂದು ಮುಜಾಹಿದ್ ಹೇಳಿದ್ದಾರೆ.

"ಕ್ಯಾಬಿನೆಟ್ ಇನ್ನೂ ಪೂರ್ಣಗೊಂಡಿಲ್ಲ, ಇದು ಕೇವಲ ಕಾರ್ಯಾರಂಭ " ಎಂದು ಮುಜಾಹಿದ್ ಕಾಬೂಲ್‌ನ ಸರ್ಕಾರಿ ಮಾಹಿತಿ ಮತ್ತು ಮಾಧ್ಯಮ ಕೇಂದ್ರದಲ್ಲಿ ತಿಳಿಸಿದ್ದಾರೆ.

ಮುಲ್ಲಾ ಮೊಹಮ್ಮದ್ ಹಸನ್ ಅವರು ಪ್ರಸ್ತುತ 'ರೆಹಾಬ್ರಿ ಶುರಾ ' ಸಮಿತಿಯ ಮುಖ್ಯಸ್ಥರಾಗಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.  ಅವರು ಪ್ರಸ್ತುತ ಕಂದಹಾರ್‌ನಲ್ಲಿದ್ದುಕೊಂಡು ವ್ಯವಹರಿಸುತ್ತಿದ್ದಾರೆ. 

ಮುಲ್ಲಾ ಹಸನ್‌ ಸುಮಾರು 20 ವರ್ಷಗಳಿಂದ  ಈ ಸ್ಥಾನದಲ್ಲಿದ್ದಾರೆ.  1996 ರಲ್ಲಿ ರಚನೆಯಾದ ತಾಲಿಬಾನ್ ಸರ್ಕಾರದಲ್ಲಿ ಅವರು ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com