ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಮಾಡಿಕೊಳ್ಳುವ ಪ್ರಸ್ತಾಪ ತಿರಸ್ಕರಿಸಿದ ಪಾಕ್

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಆರ್ಥಿಕ ಸಮನ್ವಯ ಸಮಿತಿ(ಇಸಿಸಿ)ಯ ಪ್ರಸ್ತಾಪವನ್ನು ಪಾಕಿಸ್ತಾನ ಸಚಿವ ಸಂಪುಟ ಗುರುವಾರ ತಿರಸ್ಕರಿಸಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.

Published: 01st April 2021 07:01 PM  |   Last Updated: 01st April 2021 07:01 PM   |  A+A-


Pakistani_Prime_Minister_Imran_Khan1

ಪಾಕ್ ಪ್ರಧಾನಿ ಇಮ್ರಾನ್ ಖಾನ್

Posted By : Lingaraj Badiger
Source : PTI

ಇಸ್ಲಾಮಾಬಾದ್: ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಆರ್ಥಿಕ ಸಮನ್ವಯ ಸಮಿತಿ(ಇಸಿಸಿ)ಯ ಪ್ರಸ್ತಾಪವನ್ನು ಪಾಕಿಸ್ತಾನ ಸಚಿವ ಸಂಪುಟ ಗುರುವಾರ ತಿರಸ್ಕರಿಸಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.

ನಿನ್ನೆಯಷ್ಟೇ, ಕಳೆದ ಎರಡು ವರ್ಷಗಳಿಂದ ಭಾರತದಿಂದ ಸಕ್ಕರೆ ಮತ್ತು ಹತ್ತಿ ಆಮದಿಗೆ ಹೇರಿದ್ದ ನಿಷೇಧವನ್ನು ಶೀಘ್ರದಲ್ಲೇ ತೆರವುಗೊಳಿಸಿ, ಸಕ್ಕರೆ ಮತ್ತು ಹತ್ತಿ ಆಮದು ಮಾಡಿಕೊಳ್ಳಲಾಗುವುದು ಎಂದು ಪಾಕ್ ನೂತನ ಹಣಕಾಸು ಸಚಿವ ಹಮ್ಮದ್ ಅಜರ್ ಹೇಳಿದ್ದರು.

ಆದರೆ ಇಂದು ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಭಾರತದಿಂದ ಹತ್ತಿ ನೂಲು ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಇಸಿಸಿ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಜಿಯೋ ಟಿವಿ ವರದಿ ಮಾಡಿದೆ.

ಪಾಕ್ ಸಚಿವ ಸಂಪುಟ ಸಭೆಯ ನಿರ್ಧಾರದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.

ಸಚಿವ ಸಂಪುಟ ಸಭೆಗೂ ಮುನ್ನ ಮಾತನಾಡಿದ್ದ ಪ್ರಧಾನಿ ಇಮ್ರಾನ್ ಖಾನ್ ಅವರ ಆಪ್ತ, ಮಾನವ ಹಕ್ಕುಗಳ ಸಚಿವ ಶಿರೀನ್ ಮಜಾರಿ, ಇಸಿಸಿ ನಿರ್ಧಾರಗಳಿಗೆ ಸಂಪುಟ ಅನುಮೋದಿಸಬೇಕಾಗಿದೆ. ಸಂಪುಟ ಅನುಮತಿ ನೀಡಿದರೆ ಮಾತ್ರ ಹತ್ತಿ ಮತ್ತು ಸಕ್ಕರೆ ಆಮದು ಮಾಡಿಕೊಳ್ಳಲು ಸಾಧ್ಯ ಎಂದಿದ್ದರು.

Stay up to date on all the latest ಅಂತಾರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp