ಆರ್ಟಿಕಲ್ 370: ಭಾರತದಿಂದ ಸಕ್ಕರೆ, ಹತ್ತಿ ಆಮದು ವಿಷಯದಲ್ಲಿ ಪಾಕ್ ಯು-ಟರ್ನ್!

ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿರುವುದನ್ನು ವಿರೋಧಿಸುತ್ತಿರುವ ಪಾಕಿಸ್ತಾನ ಭಾರತದಿಂದ ಸಕ್ಕರೆ, ಹತ್ತಿ ಆಮದು ವಿಷಯಕ್ಕೆ ಸಂಬಂಧಿಸಿದಂತೆ ಯು-ಟರ್ನ್ ಹೊಡೆದಿದೆ.

Published: 02nd April 2021 03:10 AM  |   Last Updated: 02nd April 2021 01:01 PM   |  A+A-


Pakistan Prime Minister Imran Khan

ಪಾಕಿಸ್ತಾನ ಅಧ್ಯಕ್ಷ ಇಮ್ರಾನ್ ಖಾನ್

Posted By : Srinivas Rao BV

ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿರುವುದನ್ನು ವಿರೋಧಿಸುತ್ತಿರುವ ಪಾಕಿಸ್ತಾನ ಭಾರತದಿಂದ ಸಕ್ಕರೆ, ಹತ್ತಿ ಆಮದು ವಿಷಯಕ್ಕೆ ಸಂಬಂಧಿಸಿದಂತೆ ಯು-ಟರ್ನ್ ಹೊಡೆದಿದೆ. 

ಏ.1 ರಂದು ನಡೆದ ಪಾಕಿಸ್ತಾನ ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ, ಭಾರತದಿಂದ ಸಕ್ಕರೆ, ಹತ್ತಿ ಆಮದು ಮಾಡಿಕೊಳ್ಳುವುದಕ್ಕೆ ನಿರ್ಬಂಧ ಮುಂದುವರೆಸಿದೆ. 
 
ಇದಕ್ಕೂ ಮುನ್ನ ಸಚಿವ ಸಂಪುಟದ ಪಾಕಿಸ್ತಾನ ಆರ್ಥಿಕ ಕಾರಿಡಾರ್ ಸಮಿತಿ (ಇಸಿಸಿ) ಜೂ.30 ವರೆಗೆ ಭಾರತದಿಂದ 500,000 ಮೆಟ್ರಿಕ್ ಟನ್ ಗಳಷ್ಟು ವೈಟ್ ಶುಗರ್ ಹಾಗೂ ಹತ್ತಿಯನ್ನು ಆಮದು ಮಾಡಿಕೊಳ್ಳುವುದಕ್ಕೆ ಅನುಮತಿ ನೀಡಿತ್ತು. ಆದರೆ ಈ ಬೆನ್ನಲ್ಲೇ ಅನುಮತಿಯನ್ನು ರದ್ದುಗೊಳಿಸಲಾಗಿದೆ.

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಮರುಸ್ಥಾಪನೆ ಮಾಡುವವರೆಗೂ ಭಾರತದಿಂದ ಹತ್ತಿ, ಸಕ್ಕರೆ ಆಮದು ಮಾಡಿಕೊಳ್ಳುವುದಿಲ್ಲ ಎಂದು ಪಾಕ್ ಹೇಳಿದೆ.
 

Stay up to date on all the latest ಅಂತಾರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp