ಅಮೆರಿಕ ಕ್ಯಾಪಿಟಲ್ ಕಟ್ಟಡದ ಮೇಲೆ ದಾಳಿ, ಪೊಲೀಸ್ ಅಧಿಕಾರಿ ಸಾವು

ಅಮೆರಿಕ ಕ್ಯಾಪಿಟಲ್ ಕಟ್ಟಡಕ್ಕೆ ವ್ಯಕ್ತಿಯೋರ್ವ ಕಾರು ನುಗ್ಗಿಸಲು ಯತ್ನಿಸಿದ್ದು, ಈ ಘಟನೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಕೇವಲ ಮೂರು ತಿಂಗಳ ಅವಧಿಯಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ದುರಂತ ಸಂಭವಿಸಿದೆ.

Published: 03rd April 2021 11:43 AM  |   Last Updated: 03rd April 2021 11:44 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : UNI

ವಾಷಿಂಗ್ಟನ್: ಅಮೆರಿಕ ಕ್ಯಾಪಿಟಲ್ ಕಟ್ಟಡಕ್ಕೆ ವ್ಯಕ್ತಿಯೋರ್ವ ಕಾರು ನುಗ್ಗಿಸಲು ಯತ್ನಿಸಿದ್ದು, ಈ ಘಟನೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಕೇವಲ ಮೂರು ತಿಂಗಳ ಅವಧಿಯಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ದುರಂತ ಸಂಭವಿಸಿದೆ.

ಕಟ್ಟಡದ ಮುಂದಿನ ಬ್ಯಾರಿಕೇಡ್ ಬಳಿ ನಿಂತಿದ್ದ ಇಬ್ಬರು ಅಧಿಕಾರಿಗಳ ಮೇಲೆ ಆತ ಕಾರು ಹತ್ತಿಸಿರುವುದಲ್ಲದೆ ಅಲ್ಲದೇ ಚಾಕುವಿನಿಂದ ಅಧಿಕಾರಿಗಳ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವೇಳೆ ಅಧಿಕಾರಿಗಳು ಶಂಕಿತ ಆರೋಪಿ ಮೇಲೆ ದಾಳಿ ನಡೆಸಿದ್ದು, ಆತ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾನೆ. ಗಾಯಗೊಂಡ ಮತ್ತೋರ್ವ ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕ್ಯಾಪಿಟಲ್ ಪೊಲೀಸ್ ಕಾರ್ಯಕಾರಿ ಮುಖ್ಯಸ್ಥ ಯೋಗಾನಂದ ಪಿಟ್ಮನ್ ತಿಳಿಸಿದ್ದಾರೆ.

Stay up to date on all the latest ಅಂತಾರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp