ಧ್ವಂಸ ಮಾಡಲಾಗಿದ್ದ ಹಿಂದೂ ದೇಗುಲದ ಪುನರ್ ನಿರ್ಮಾಣಕ್ಕೆ 3.48 ಕೋಟಿ ರೂ. ಬಿಡುಗಡೆ ಮಾಡಿದ ಪಾಕ್‌ನ ಕೆಪಿಕೆ ಸರ್ಕಾರ

ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೆಲವು ಸ್ಥಳೀಯ ಮೌಲ್ವಿಗಳು ಮತ್ತು ಇಸ್ಲಾಮಿಸ್ಟ್ ಪಕ್ಷದ ಜಮಿಯತ್ ಉಲೆಮಾ-ಇ-ಇಸ್ಲಾಂ ಸದಸ್ಯರ ನೇತೃತ್ವದ ಗುಂಪಿನಿಂದ ಹಾನಿಗೊಳಗಾಗಿದ್ದ ಹಿಂದೂ ದೇವಾಲಯದ ಪುನರ್ ನಿರ್ಮಾಣಕ್ಕಾಗಿ ಪಾಕಿಸ್ತಾನದ ಖೈಬರ್ ಪಕ್ತುನ್ಖ್ವಾ ಪ್ರಾಂತೀಯ ಸರ್ಕಾರ 3.48 ಕೋಟಿ ರೂ. ಬಿಡುಗಡೆ ಮಾಡಿದೆ.
ದೇಗುಲ ಧ್ವಂಸದ ದೃಶ್ಯ
ದೇಗುಲ ಧ್ವಂಸದ ದೃಶ್ಯ

ಪೇಶಾವರ: ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೆಲವು ಸ್ಥಳೀಯ ಮೌಲ್ವಿಗಳು ಮತ್ತು ಇಸ್ಲಾಮಿಸ್ಟ್ ಪಕ್ಷದ ಜಮಿಯತ್ ಉಲೆಮಾ-ಇ-ಇಸ್ಲಾಂ ಸದಸ್ಯರ ನೇತೃತ್ವದ ಗುಂಪಿನಿಂದ ಹಾನಿಗೊಳಗಾಗಿದ್ದ ಹಿಂದೂ ದೇವಾಲಯದ ಪುನರ್ ನಿರ್ಮಾಣಕ್ಕಾಗಿ ಪಾಕಿಸ್ತಾನದ ಖೈಬರ್ ಪಕ್ತುನ್ಖ್ವಾ ಪ್ರಾಂತೀಯ ಸರ್ಕಾರ 3.48 ಕೋಟಿ ರೂ. ಬಿಡುಗಡೆ ಮಾಡಿದೆ. 

ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಕರಕ್ ಜಿಲ್ಲೆಯ ಟೆರ್ರಿ ಗ್ರಾಮದಲ್ಲಿ ಕಳೆದ ವರ್ಷ ಡಿಸೆಂಬರ್ 30ರಂದು ನಾಶ ಮಾಡಲಾಗಿದ್ದ ಶ್ರೀ ಪರಮಹನ್ಸ್ ಜೀ ಮಹಾರಾಜ್ ಅವರ ಸಮಾಧಿಯ ಪುನರ್ನಿರ್ಮಾಣಕ್ಕಾಗಿ ಪ್ರಾಂತೀಯ ಸರ್ಕಾರವು ಅಕಾಫ್ ಇಲಾಖೆಗೆ 3,48,29,000 ರೂ. ಬಿಡುಗಡೆ ಮಾಡಿದೆ. 

ಒಂದು ಶತಮಾನದಷ್ಟು ಹಳೆಯದಾದ ದೇವಾಲಯ ಮತ್ತು ಅದರ ಪಕ್ಕದ 'ಸಮಾಧಿ' ಮೇಲೆ ನಡೆದ ದಾಳಿಯನ್ನು ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮುಖಂಡರು ತೀವ್ರವಾಗಿ ಖಂಡಿಸಿದ್ದರು. ದೇವಾಲಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಪ್ರಾಂತೀಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com