ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ ಹಿನ್ನಲೆ: ದಕ್ಷಿಣ ಆಫ್ರಿಕಾ ಸರ್ಕಾರದಿಂದಲೂ ಜಾನ್ಸನ್ ಅಂಡ್ ಜಾನ್ಸನ್ ಲಸಿಕೆ ನಿಷೇಧ

ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ ಹಿನ್ನಲೆ ಅಮೆರಿಕ ಸರ್ಕಾರ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಯ ಕೋವಿಡ್ ಲಸಿಕೆಯನ್ನು ನಿಷೇಧಿಸಿದ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ಸರ್ಕಾರ ಕೂಡ ಈ ಲಸಿಕೆ ಬಳಕೆ ಮೇಲೆ ನಿರ್ಬಂಧ ಹೇರಿದೆ.
ಜಾನ್ಸನ್ ಅಂಡ್ ಜಾನ್ಸನ್ ಲಸಿಕೆ
ಜಾನ್ಸನ್ ಅಂಡ್ ಜಾನ್ಸನ್ ಲಸಿಕೆ

ಜೋಹಾನ್ಸ್‌ಬರ್ಗ್: ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ ಹಿನ್ನಲೆ ಅಮೆರಿಕ ಸರ್ಕಾರ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಯ ಕೋವಿಡ್ ಲಸಿಕೆಯನ್ನು ನಿಷೇಧಿಸಿದ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ಸರ್ಕಾರ ಕೂಡ ಈ ಲಸಿಕೆ ಬಳಕೆ ಮೇಲೆ ನಿರ್ಬಂಧ ಹೇರಿದೆ.

ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯ ಲಸಿಕೆ ಪಡೆದ ದಕ್ಷಿಣ ಆಫ್ರಿಕಾದ ಆರು ಮಹಿಳೆಯರ ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್‌ನಲ್ಲಿ ಇಳಿಕೆಯಾಗಿರುವ ವರದಿಗಳು ಬಂದಿದ್ದವು. ಇದೇ ಕಾರಣಕ್ಕೆ ದಕ್ಷಿಣ ಆಫ್ರಿಕಾ ಸರ್ಕಾರ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಯ ಲಸಿಕೆ ಬಳಕೆಯನ್ನು ನಿಷೇಧಿಸಲು  ನಿರ್ಧರಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ದಕ್ಷಿಣ ಆಫ್ರಿಕಾ ಆರೋಗ್ಯ ಸಚಿವ ಜ್ವೆಲಿ ಮಿಜೆ, 'ಲಸಿಕೆಯಿಂದ ಮಹಿಳೆಯರ ಅನಾರೋಗ್ಯದ ಬಗ್ಗೆ ಮಾಹಿತಿ ಪಡೆದ ಕೂಡಲೇ ನಾನು ವಿಜ್ಞಾನಿಗಳೊಂದಿಗೆ ತಕ್ಷಣದ ಚರ್ಚೆ ನಡೆಸಿದ್ದೇನೆ. ಯುಎಸ್ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ (FDA) ನಿರ್ಧಾರವನ್ನು ಲಘುವಾಗಿ  ತೆಗೆದುಕೊಳ್ಳಲು ಸಾಧ್ಯವಿಲ್ಲ. ಲಸಿಕೆ ಪಡೆದ ನಂತರ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣ ತಿಳಿಯುವವರೆಗೂ ನಾವು ಜಾನ್ಸನ್ ಅಂಡ್ ಜಾನ್ಸನ್ ಲಸಿಕೆಯನ್ನು ಬಳಸುವುದನ್ನು ನಿಲ್ಲಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಅಂತೆಯೇ 289,787 ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆದಿದ್ದಾರೆ. ರಕ್ತ ಹೆಪ್ಪುಗಟ್ಟುವಿಕೆಯ ಎಲ್ಲಾ ಪ್ರಕರಣಗಳು ಅಮೆರಿಕದಿಂದ ಬಂದಿವೆ. ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಅಂಕಿಅಂಶಗಳ ಪ್ರಕಾರ, ದಕ್ಷಿಣ ಆಫ್ರಿಕಾದಲ್ಲಿ 1,561,559 ಜನರು ಕೊರೋನಾವೈರಸ್ ಸೋಂಕಿಗೆ ಒಳಗಾಗಿದ್ದಾರೆ ಮತ್ತು 53,498  ಜನರು ಸಾವನ್ನಪ್ಪಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com