ಕಾಬೂಲ್ ವಿಮಾನ ನಿಲ್ದಾಣದಲ್ಲಿ 5 ಸಾವು: ಅಮೆರಿಕನ್ ಸೈನಿಕರ ಕೃತ್ಯ ಶಂಕೆ

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬರುತ್ತಿರುವ ನಡುವೆಯೇ, ದೇಶದಿಂದ ಪಲಾಯನ ಮಾಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಐವರು ಮಂದಿ ಸಾವನ್ನಪ್ಪಿರುವ ಘಟನೆ ನಡೆಡಿದೆ. 
ಕಾಬೂಲ್ ವಿಮಾನ ನಿಲ್ದಾಣ
ಕಾಬೂಲ್ ವಿಮಾನ ನಿಲ್ದಾಣ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬರುತ್ತಿರುವ ನಡುವೆಯೇ, ದೇಶದಿಂದ ಪಲಾಯನ ಮಾಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಐವರು ಮಂದಿ ಸಾವನ್ನಪ್ಪಿರುವ ಘಟನೆ ನಡೆಡಿದೆ. 

ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಏರಲು ಉಂಟಾದ ನೂಕುನುಗ್ಗಲಿನಿಂದಾಗಿ ಕನಿಷ್ಟ ಐದು ಮಂದಿ ನಾಗರಿಕರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ೫ ಮೃತ ದೇಹಗಳನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಹೊತ್ತೊಯ್ದಿದ್ದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. 

ಈ ಹಿಂದೆ ನೂಕುನುಗ್ಗಲನ್ನು ನಿಯಂತ್ರಿಸುವ ಸಲುವಾಗಿ ಅಮೆರಿಕ ಸಾವಿರಕ್ಕೂ ಹೆಚ್ಚು ಸೈನಿಕರನ್ನು ನಿಯೋಜನೆ ಮಾಡಿತ್ತು. ಈ ಸಂದರ್ಭದಲ್ಲಿ ವಿಮಾನವೊಂದನ್ನು ಏರಲು ನಾಗರಿಕರು ಮುನ್ನುಗ್ಗಿದಾಗ, ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತು ಅಮೆರಿಕನ್ ಸೈನಿಕರು ಗಾಳಿಯಲ್ಲಿ ಗುಂಡು ಹಲವು ಸುತ್ತು ಗುಂಡು ಹಾರಿಸಿದ್ದರು. 

ಇದೀಗ ವಿಮಾನ ನಿಲ್ದಾಣದಲ್ಲಿ ಸತ್ತವರು ಕಾಲ್ತುಳಿತಕ್ಕೆ ಸಿಕ್ಕಿ ಸತ್ತವರೇ ಅಥವಾ ಅಮೆರಿಕದ ಸೈನಿಕರ ಗುಂಡಿಗೆ ಬಲಿಯಾದರೇ ಎಂದು ಖಚಿತವಾಗಿ ತಿಳಿದುಬಂದಿಲ್ಲ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com