ಅಫ್ಘಾನಿಸ್ತಾನ ಪರಿಸ್ಥಿತಿ: ರಾಷ್ಟ್ರೀಯ ಭದ್ರತಾ ಮಂಡಳಿಯೊಂದಿಗೆ ಪಾಕ್ ಪ್ರಧಾನಿ ಚರ್ಚೆ

ಅಫ್ಘಾನಿಸ್ತಾನದ ಪರಿಸ್ಥಿತಿಯ ಕುರಿತು ರಾಷ್ಟ್ರೀಯ ಭದ್ರತಾ ಮಂಡಳಿಯೊಂದಿಗೆ ಪಾಕಿಸ್ತಾನ ಪ್ರಧಾನಿ ಚರ್ಚಿಸಲಿದ್ದಾರೆ ಎಂದು ಪಾಕಿಸ್ತಾನದ ಜಿಯೋ ಟಿವಿ ಬ್ರಾಡ್ಕಾಸ್ಟರ್ ಸೋಮವಾರ ವರದಿ ಮಾಡಿದೆ. 
ಇಮ್ರಾನ್ ಖಾನ್
ಇಮ್ರಾನ್ ಖಾನ್

ಇಸ್ಲಾಮಾಬಾದ್: ಅಫ್ಘಾನಿಸ್ತಾನದ ಪರಿಸ್ಥಿತಿಯ ಕುರಿತು ರಾಷ್ಟ್ರೀಯ ಭದ್ರತಾ ಮಂಡಳಿಯೊಂದಿಗೆ ಪಾಕಿಸ್ತಾನ ಪ್ರಧಾನಿ ಚರ್ಚಿಸಲಿದ್ದಾರೆ ಎಂದು ಪಾಕಿಸ್ತಾನದ ಜಿಯೋ ಟಿವಿ ಬ್ರಾಡ್ಕಾಸ್ಟರ್ ಸೋಮವಾರ ವರದಿ ಮಾಡಿದೆ. 

ತಾಲಿಬಾನ್ ದೇಶದ ಮೇಲೆ ತಮ್ಮ ಹಿಡಿತವನ್ನು ಬಲಪಡಿಸಿಕೊಂಡ ನಂತರ ಅಫ್ಘಾನಿಸ್ತಾನದಲ್ಲಿನ ತುರ್ತು ಪರಿಸ್ಥಿತಿಯನ್ನು ಪರಿಶೀಲಿಸಲು ಖಾನ್ ರಾಷ್ಟ್ರೀಯ ಭದ್ರತಾ ಮಂಡಳಿಯ ಸಭೆಯನ್ನು ಕರೆದಿದ್ದಾರೆ. 

ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಶಿ ಅವರು ಅಫ್ಘಾನಿಸ್ತಾನದ ಬೆಳವಣಿಗೆ ಬಗ್ಗೆ ಯಾವುದೇ ಒಲವು ಹೊಂದಿಲ್ಲ ಮತ್ತು "ಅಂತಾರಾಷ್ಟ್ರೀಯ ಒಮ್ಮತ, ನೆಲದ ವಾಸ್ತವತೆಗಳು, ಪಾಕಿಸ್ತಾನದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಅನುಗುಣವಾಗಿ ತಾಲಿಬಾನ್ ಸರ್ಕಾರವನ್ನು ಗುರುತಿಸಲಾಗುವುದು" ಎಂದು ಭಾನುವಾರ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com