ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬರ್ ಮೇಲೆ ಅಮೆರಿಕಾ ಏರ್ ಸ್ಟ್ರೈಕ್: ತಾಲಿಬಾನ್
ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ದಾಳಿಗೆ ಸಜ್ಜಾಗಿದ್ದ ಆತ್ಮಾಹುತಿ ಬಾಂಬರ್ ಅನ್ನು ಗುರಿಯಾಗಿಸಿಕೊಂಡು ಅಮೆರಿಕಾದ ಸೇನಾ ವೈಮಾನಿಕ ದಾಳಿ ನಡೆಸಿದೆ ಎಂದು ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ.
Published: 29th August 2021 08:50 PM | Last Updated: 29th August 2021 08:50 PM | A+A A-

ಅಮೆರಿಕಾ ಸೇನೆ
ಕಾಬೂಲ್: ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ದಾಳಿಗೆ ಸಜ್ಜಾಗಿದ್ದ ಆತ್ಮಾಹುತಿ ಬಾಂಬರ್ ಅನ್ನು ಗುರಿಯಾಗಿಸಿಕೊಂಡು ಅಮೆರಿಕಾದ ಸೇನಾ ವೈಮಾನಿಕ ದಾಳಿ ನಡೆಸಿದೆ ಎಂದು ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ.
ಇಸ್ಲಾಮಿಕ್ ಎಮಿರೆಟ್ಸ್ ಆಫ್ ಅಫ್ಘಾನಿಸ್ತಾನದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಪತ್ರಕರ್ತರೊಬ್ಬರಿಗೆ ನೀಡಿದ ಸಂದೇಶದಲ್ಲಿ ಅಮೆರಿಕಾ ಏರ್ ಸ್ಟ್ರೈಕ್ ನಡೆದಿದೆ ಎಂದು ಹೇಳಿದ್ದಾರೆ.
ಕಾಬೂಲ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುವ್ಯ ದಿಕ್ಕಿನಲ್ಲಿ ಭಾನುವಾರ ರಾಕೆಟ್ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಇತ್ತೀಚೆಗಷ್ಟೇ ಐಸಿಸ್-ಕೆ ಉಗ್ರ ಸಂಘಟನೆ ಕಾಬೂಲ್ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿತ್ತು. ಪರಿಣಾಮ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ರಾಕೆಟ್ ದಾಳಿ ನಡೆದಿದೆ.
ಕಾಬೂಲ್ ನಲ್ಲಿ ಮತ್ತೊಂದು ಭಯೋತ್ಪಾದಕ ದಾಳಿ ನಡೆಯುವ ಅಪಾಯವಿದೆ ಎಂದು ಅಮೆರಿಕಾ ಎಚ್ಚರಿಕೆ ನೀಡಿದ ಬೆನ್ನಲ್ಲೇ ರಾಕೆಟ್ ದಾಳಿ ನಡೆದಿದೆ.