24ರಿಂದ 36 ಗಂಟೆಗಳಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಮತ್ತೆ ಉಗ್ರ ದಾಳಿ ಸಾಧ್ಯತೆ: ಅಮೆರಿಕ ಎಚ್ಚರಿಕೆ

ಅಫ್ಗಾನಿಸ್ತಾನ ರಾಜಧಾನಿ ಕಾಬೂಲ್ ವಿಮಾನ ನಿಲ್ದಾಣಕ್ಕೆ ಮತ್ತೆ ದಾಳಿ ಭೀತಿ ಎದುರಾಗಿದ್ದು, ಇಸಿಸ್-ಕೆ ಉಗ್ರರು ಮತ್ತೆ 24ರಿಂದ 36 ಗಂಟೆಗಳಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಮತ್ತೆ ಉಗ್ರ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.
ಕಾಬುಲ್ ವಿಮಾನ ನಿಲ್ಗಾಣದ ಬಳಿ ಸ್ಫೋಟ
ಕಾಬುಲ್ ವಿಮಾನ ನಿಲ್ಗಾಣದ ಬಳಿ ಸ್ಫೋಟ

ಕಾಬೂಲ್: ಅಫ್ಗಾನಿಸ್ತಾನ ರಾಜಧಾನಿ ಕಾಬೂಲ್ ವಿಮಾನ ನಿಲ್ದಾಣಕ್ಕೆ ಮತ್ತೆ ದಾಳಿ ಭೀತಿ ಎದುರಾಗಿದ್ದು, ಇಸಿಸ್-ಕೆ ಉಗ್ರರು ಮತ್ತೆ 24ರಿಂದ 36 ಗಂಟೆಗಳಲ್ಲಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಮತ್ತೆ ಉಗ್ರ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕ ಎಚ್ಚರಿಕೆ ನೀಡಿದೆ.

ಕಾಬೂಲ್ ವಿಮಾನ ನಿಲ್ದಾಣಕ್ಕೆ ದಾಳಿ ಭೀತಿ ಇರುವುದು ಖಚಿತ ಮತ್ತು ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿದೆ. ವಿಮಾನ ನಿಲ್ದಾಣದ ಸುತ್ತ ಇರುವ ಅಮೆರಿಕ ನಾಗರಿಕರು ತಕ್ಷಣವೇ ಜಾಗ ಖಾಲಿ ಮಾಡಬೇಕು ಎಂದು ಕಾಬೂಲ್‌ನಲ್ಲಿರುವ ಅಮೆರಿಕ ದೂತಾವಾಸ ಕಚೇರಿಯೂ ಎಚ್ಚರಿಕೆ ನೀಡಿದೆ. 

ಅಲ್ಲದೆ ಕೂಡಲೇ ಜನರು ಆ ಪ್ರದೇಶ ತೊರೆಯುವುದು ಒಳ್ಳೆಯದು. ಕಾಬೂಲ್ ವಿಮಾನ ನಿಲ್ದಾಣದಿಂದ ದೂರವಿರುವಂತೆ ಅಮೆರಿಕ ಎಚ್ಚರಿಕೆ ನೀಡಿದೆ.  

ಈ ಬಗ್ಗೆ ಮಾತನಾಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು, 'ಆಫ್ಘಾನಿಸ್ತಾನದ ಪರಿಸ್ಥಿತಿ ಅತ್ಯಂತ ಅಪಾಯಕಾರಿಯಾಗಿ ಮುಂದುವರಿದಿದೆ. ವಿಮಾನ ನಿಲ್ದಾಣದ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಹೆಚ್ಚಾಗಿದೆ. ಮುಂದಿನ 24-36 ಗಂಟೆಗಳಲ್ಲಿ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ನಮ್ಮ ಕಮಾಂಡರ್‌ಗಳು ನನಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ.

ನಿನ್ನೆ ಕೂಡ ಅಮೆರಿಕ ರಾಯಭಾರ ಕಚೇರಿ ಇಂತಹುದೇ ಎಚ್ಚರಿಕೆ ನೀಡಿತ್ತು. ಕಾಬೂಲ್ ವಿಮಾನ ನಿಲ್ದಾಣದ ಅಬ್ಬೆ ಗೇಟ್, ಈಸ್ಟ್ ಗೇಟ್ ಅಥವಾ ನಾರ್ತ್ ಗೇಟ್ ನಲ್ಲಿರುವ ಅಮೆರಿಕ ನಾಗರಿಕರು ಈಗಲೇ ತುರ್ತಾಗಿ ಹೊರಡಬೇಕು ಎಂದು ಸೂಚಿಸಿತ್ತು. ಈ ಬಗ್ಗೆ ಮಾತನಾಡಿದ್ದ  ಅಮೆರಿಕದ ಗುಪ್ತಚರ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು 'ಅಫ್ಘಾನಿಸ್ತಾನದ ಇಸ್ಲಾಮಿಕ್ ಸ್ಟೇಟ್ ಅಂಗಸಂಸ್ಥೆ ಇಸಿಸ್ ಕೆಯಿಂದ ವಿಮಾನ ನಿಲ್ದಾಣದಲ್ಲಿ "ನಿರ್ದಿಷ್ಟ" ಮತ್ತು "ನಂಬಲರ್ಹ" ಸಂಭಾವ್ಯ ದಾಳಿ ಸಂಚನ್ನು ಟ್ರ್ಯಾಕ್ ಮಾಡಲಾಗಿದೆ. ಉಗ್ರರು ಕನಿಷ್ಠ 12ಕ್ಕೂ ಹೆಚ್ಚು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ. ದಾಳಿಗಳಿಗೆ ಜನಾಂಗೀಯ ಅಲ್ಪಸಂಖ್ಯಾತರು ಮತ್ತು ಇತರೆ ದೇಶಗಳ ನಾಗರಿಕರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳಿದ್ದರು. 

ಕಳೆದ ಗುರುವಾರ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದಿದ್ದ ಆತ್ಮಹತ್ಯಾ ದಾಳಿಯಲ್ಲಿ 13 ಮಂದಿ ಅಮೆರಿಕದ ಸೈನಿಕರು ಸೇರಿದಂತೆ 78 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತಿಕಾರವಾಗಿ ಅಫ್ಗಾನಿಸ್ತಾನದ ನಂಗರ್‌ಹಾರ್ ಪ್ರಾಂತ್ಯದಲ್ಲಿ ಅಮೆರಿಕ ಸೇನೆಯು ಶನಿವಾರ ಬೆಳಿಗ್ಗೆ ಡ್ರೋನ್ ದಾಳಿ ನಡೆಸಿದ್ದು, ಇಬ್ಬರು ಐಸಿಸ್ ಉಗ್ರರು ಹತರಾಗಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com