ಯುವತಿ ಮೇಲೆ ಗ್ಯಾಂಗ್ ರೇಪ್: ಶಂಕಿತ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಿದ ಪಾಕ್ ಕೋರ್ಟ್, ಅಪರಾಧಿಗಳು ಇನ್ನೂ ಸಿಕ್ಕಿಲ್ಲ
ಪಂಜಾಬ್ ಪ್ರಾಂತ್ಯದಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ದರೋಡೆ ನಡೆಸಿದ ನಾಲ್ವರು ಅಪರಾಧಿಗಳಿಗೆ ಪಾಕಿಸ್ತಾನದ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ.
Published: 16th December 2021 06:39 PM | Last Updated: 16th December 2021 06:39 PM | A+A A-

ಸಂಗ್ರಹ ಚಿತ್ರ
ಲಾಹೋರ್: ಪಂಜಾಬ್ ಪ್ರಾಂತ್ಯದಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ದರೋಡೆ ನಡೆಸಿದ ನಾಲ್ವರು ಅಪರಾಧಿಗಳಿಗೆ ಪಾಕಿಸ್ತಾನದ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ.
ಕಳೆದ ಜನವರಿಯಲ್ಲಿ ನಾಲ್ವರು ಶಂಕಿತರಾದ ನಸೀರ್ ಅಹ್ಮದ್, ಮುಹಮ್ಮದ್ ವಸೀಮ್, ಉಮರ್ ಹಯಾತ್ ಮತ್ತು ಫಕರ್ ಹುಸೇನ್ ಎಂಬುವರು ಲಾಹೋರ್‌ನಿಂದ ಸುಮಾರು 400 ಕಿಮೀ ದೂರದಲ್ಲಿರುವ ಬಹವಾಲ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮನೆಗೆ ನುಗ್ಗಿ ನಗದು ಮತ್ತು ಚಿನ್ನಾಭರಣ ದೋಚಿ ನಂತರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ನಾಪತ್ತೆಯಾಗಿದ್ದಾರೆ ಎಂದು ಪ್ರಾಸಿಕ್ಯೂಷನ್ ಹೇಳಿದೆ.
ದರೋಡೆಯ ನಂತರ, ಶಂಕಿತರು ಯುವತಿಯನ್ನು ಪ್ರತ್ಯೇಕ ಕೋಣೆಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆಕೆಯನ್ನು ಕೊಲ್ಲದಂತೆ ಪೋಷಕರು ವಿನಂತಿಸಿದ್ದರು ಎಂದು ಎಫ್ಐಆರ್ ನಲ್ಲಿ ದಾಖಲಿಸಲಾಗಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಣಾ ಅಬ್ದುಲ್ ಹಕೀಮ್ ಬುಧವಾರ ತೀರ್ಪು ಪ್ರಕಟಿಸಿದ್ದಾರೆ.
ಕೆಲವು ತಿಂಗಳ ಹಿಂದೆ, ಮುಲ್ತಾನ್‌ನ ಶುಜಾಬಾದ್‌ನಲ್ಲಿ, ನಾಲ್ವರು ಶಸ್ತ್ರಸಜ್ಜಿತ ದರೋಡೆಕೋರರು ನವವಿವಾಹಿತ ವಧುವಿನ ಮೇಲೆ ಅವಳ ಪತಿಯ ಮುಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಪೊಲೀಸರು ಇನ್ನೂ ಆರೋಪಿಗಳನ್ನು ಬಂಧಿಸಿಲ್ಲ.