'ಕೀಲುಗೊಂಬೆ' ಪ್ರಧಾನಿ ಇಮ್ರಾನ್‌ ಖಾನ್‌ ಆತ್ಮಹತ್ಯೆ ಮಾಡಿಕೊಳ್ಳುವ ದಿನ ಎದುರು ನೋಡುತ್ತಿರುವೆ: ನವಾಜ್ ಷರೀಫ್

ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ ಹಾಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. 
ಇಮ್ರಾನ್ ಖಾನ್-ನವಾಜ್ ಷರೀಫ್
ಇಮ್ರಾನ್ ಖಾನ್-ನವಾಜ್ ಷರೀಫ್

ಲಂಡನ್‌: ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ ಹಾಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. 

ಪ್ರಸ್ತುತ ಲಂಡನ್‌ನಲ್ಲಿ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವ ಷರೀಫ್ ಗುರುವಾರ ಲಾಹೋರ್‌ನಲ್ಲಿ ನಡೆದ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಪಕ್ಷದ ಸಾಮಾನ್ಯ ಸಭೆಯಲ್ಲಿ ಆನ್‌ಲೈನ್‌ ಮೂಲಕ ಪಾಲ್ಗೊಂಡು ಮಾತನಾಡಿದರು. ಭಾರತದಲ್ಲಿ ಇಮ್ರಾನ್ ಖಾನ್ ಅವರನ್ನು 'ಕೀಲುಗೊಂಬೆ' ಎಂದು ಲೇವಡಿ ಮಾಡಲಾಗುತ್ತಿದೆ. ಅಮೆರಿಕಾದಲ್ಲಿ ಇಮ್ರಾನ್ ಖಾನ್ ಗಿಂತ ಅಲ್ಲಿನ ಮೇಯರ್ ಗೆ ಹೆಚ್ಚಿನ ಅಧಿಕಾರವಿದೆ ಎಂದು ವ್ಯಂಗ್ಯವಾಡಿದ್ದಾರೆ.

ದೇಶದಲ್ಲಿ ಇಮ್ರಾನ್‌ ಖಾನ್‌ ಹೇಗೆ ಅಧಿಕಾರಕ್ಕೆ ಬಂದಿದ್ದಾರೆ ಎಂಬುದು ಇಡೀ ಜಗತ್ತಿಗೇ ಗೊತ್ತಿದೆ. ಇಮ್ರಾನ್ ಜನರ ಮತಗಳ ಬದಲು ಸೇನಾ ನೆರವಿನಿಂದ ಅಧಿಕಾರಕ್ಕೆ ಬಂದಿದ್ದಾರೆ ಎಂದು ಷರೀಫ್ ಹೇಳಿದರು. ಅಂತಾರಾಷ್ಟ್ರೀಯ ಹಣಕಾಸು ನಿಧಿ ಬಳಿ ನೆರವಿಗೆ ಹೋಗುವ ಬದಲು ಆತ್ಮಹತ್ಯೆ ಮಾಡಿಕೊಳ್ಳಲು ಇಷ್ಟಪಡುವುದುದಾಗಿ ಇಮ್ರಾನ್ ಖಾನ್ ಹೇಳಿದ್ದಾರೆ. ಆದರೆ ಇಮ್ರಾನ್ ಖಾನ್ ಯಾವಾಗ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂಬುದನ್ನು ಎದುರುನೋಡುತ್ತಿರುವೆ ಎಂದು ಷರೀಫ್ ಸಂಚಲನ ಹೇಳಿಕೆ ನೀಡಿದ್ದಾರೆ.

ಪಾಕಿಸ್ತಾನದಲ್ಲಿ ಎರಡು ಭ್ರಷ್ಟಾಚಾರ ಪ್ರಕರಣಗಳಲ್ಲಿ ದೋಷಿಯಾಗಿರುವ 71 ವರ್ಷದ ನವಾಜ್‌ ಷರೀಫ್, ಲಾಹೋರ್ ಹೈಕೋರ್ಟ್ ಅನುಮತಿ ನೀಡಿದ ನಂತರ ವೈದ್ಯಕೀಯ ಚಿಕಿತ್ಸೆಗಾಗಿ ನಾಲ್ಕು ವಾರಗಳ ಕಾಲ ವಿದೇಶಕ್ಕೆ ಪ್ರಯಾಣಿಸಿದ್ದು, ನವೆಂಬರ್ 2019 ರಿಂದ ಲಂಡನ್‌ನಲ್ಲಿ ವಾಸವಾಗಿದ್ದಾರೆ. 2018ರಲ್ಲಿ ಸೇನೆಯ ನೆರವಿನಿಂದ ಅಧಿಕಾರಕ್ಕೆ ಬಂದ ಇಮ್ರಾನ್ ಸರಕಾರ ಮೊದಲ ಮೂರು ವರ್ಷಗಳಲ್ಲಿ ವಿದೇಶಿ ಸರಕಾರಗಳು ಹಾಗೂ ಹಣಕಾಸು ಸಂಸ್ಥೆಗಳಿಂದ 34 ಬಿಲಿಯನ್ ಡಾಲರ್ ಗೂ ಹೆಚ್ಚು ಸಾಲ ಪಡೆದಿದೆ ಎಂದು ಷರೀಫ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com