ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕೋವಿಡ್-19 ಪಾಸಿಟಿವ್; ಶೌಚಾಲಯದಲ್ಲಿ 5 ತಾಸು ಐಸೊಲೇಟ್ ಆದ ಸೋಂಕಿತೆ!

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕೋವಿಡ್-19 ಪಾಸಿಟೀವ್ ಕಂಡುಬಂದ ಹಿನ್ನೆಲೆಯಲ್ಲಿ ಆಕೆ ಶೌಚಾಲಯದಲ್ಲೇ ಐಸೊಲೇಟ್ ಆದ ವಿಲಕ್ಷಣ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿಕಾಗೋ: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕೋವಿಡ್-19 ಪಾಸಿಟೀವ್ ಕಂಡುಬಂದ ಹಿನ್ನೆಲೆಯಲ್ಲಿ ಆಕೆ ಶೌಚಾಲಯದಲ್ಲೇ ಐಸೊಲೇಟ್ ಆದ ವಿಲಕ್ಷಣ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ.

ಶಿಕಾಗೋದಿಂದ ಐಸ್ಲ್ಯಾಂಡ್ ಗೆ ತೆರಳುತ್ತಿದ್ದ ಮಹಿಳೆಗೆ ಮಾರ್ಗಮಧ್ಯೆ ಕೋವಿಡ್ ಪಾಸಿಟೀವ್ ಕಾಣಿಸಿಕೊಂಡಿತ್ತು. ಆದ ಕಾರಣ ಆಕೆ ಸತತ 5 ಗಂಟೆಗಳ ಕಾಲ ಶೌಚಾಲಯದಲ್ಲೇ ಐಸೊಲೇಟ್ ಆಗಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. 

ಮಿಚಿಗನ್ ನಲ್ಲಿ ಶಿಕ್ಷಕಿಯಾಗಿರುವ ಮಾರಿಸಾ ಫೋಟಿಯೊ, ವಿಮಾನ ಪ್ರಯಾಣದ ಮಾರ್ಗಮಧ್ಯದಲ್ಲಿರಬೇಕಾದರೆ ಆಕೆಗೆ ಗಂಟಲು ಬೇನೆ ಬಾಧಿಸಲು ಪ್ರಾರಂಭಿಸಿದೆ. ಆದ್ದರಿಂದ ಆಕೆ ತಕ್ಷಣ ಶೌಚಾಲಯಕ್ಕೆ ತೆರಳಿ ರ್ಯಾಪಿಡ್ ಕೋವಿಡ್-19 ಪರೀಕ್ಷೆ ಮಾಡಿಕೊಂಡಿದ್ದಾರೆ. ಈ ಕ್ಷಿಪ್ರ ಪರೀಕ್ಷೆಯಲ್ಲಿ ಆಕೆಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಡಬ್ಲ್ಯುಎಬಿಸಿ-ಟಿವಿ ವರದಿ ಪ್ರಕಟಿಸಿದೆ. 

ವಿಮಾನದಲ್ಲಿ ತೆರಳುವುದಕ್ಕೂ ಮುನ್ನ ಫೋಟಿಯೊ ಅವರು ಎರಡು ಪಿಸಿಆರ್ ಪರೀಕ್ಷೆಗಳಿಗೆ ಒಳಪಟ್ಟಿದ್ದರು ಹಾಗೂ ಐದು ಬಾರಿ ರ್ಯಾಪಿಡ್ ಪರೀಕ್ಷೆ ಮಾಡಿಕೊಂಡಿದ್ದರು. ಎಲ್ಲದರಲ್ಲೂ ಕೋವಿಡ್-19 ನೆಗೆಟೀವ್ ಬಂದಿತ್ತು. ಆದರೆ ವಿಮಾನವೇರಿದ ಒಂದೂವರೆಗಂಟೆಗಳಲ್ಲಿ ಆಕೆಗೆ ಗಂಟಲು ಬೇನೆ ಬಾಧಿಸಲು ಪ್ರಾರಂಭವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com