ದೆಹಲಿಯ ಕೆಂಪು ಕೋಟೆಗೆ ರೈತರ ಲಗ್ಗೆ ಘಟನೆಯನ್ನು ಅಮೆರಿಕದ ಕ್ಯಾಪಿಟಲ್ ಹಿಲ್ ಹಿಂಸಾಚಾರಕ್ಕೆ ಹೋಲಿಸಿದ ಭಾರತ!

ದೆಹಲಿಯ ಗಡಿಭಾಗದಲ್ಲಿ ಮುಂದುವರಿದಿರುವ ರೈತರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ, ನೂತನ ಕೃಷಿ ಕಾಯ್ದೆ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯನ್ನು ಸುಧಾರಿಸಬಹುದು. ಆದರೆ, ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್ನೆಟ್ ಸಂಪರ್ಕವನ್ನು ಕಿತ್ತುಹಾಕುವ ಮೂಲಕ ನರೇಂದ್ರ ಮೋದಿ ಸರ್ಕಾರ ಪ್ರತಿಭಟನಾಕಾರರ ವಿರುದ್ಧ ದಬ್ಬಾಳಿಕೆ ತೋರಿಸುತ್ತಿದೆ ಎಂದು ಆರೋಪಿಸಿದೆ.

Published: 05th February 2021 09:42 AM  |   Last Updated: 05th February 2021 12:55 PM   |  A+A-


On this day 71 years later, an attempt was made to desecrate the symbol of Indian Sovereignty — the Lal Quila.

ದೆಹಲಿಯ ಕೆಂಪು ಕೋಟೆ ಬಳಿ ಕಳೆದ ಜನವರಿ 26ರಂದು ನಡೆದ ರೈತರ ಹೋರಾಟದ ದೃಶ್ಯ

Posted By : Sumana Upadhyaya
Source : The New Indian Express

ನವದೆಹಲಿ: ದೆಹಲಿಯ ಗಡಿಭಾಗದಲ್ಲಿ ಮುಂದುವರಿದಿರುವ ರೈತರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ, ನೂತನ ಕೃಷಿ ಕಾಯ್ದೆ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯನ್ನು ಸುಧಾರಿಸಬಹುದು. ಆದರೆ, ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್ನೆಟ್ ಸಂಪರ್ಕವನ್ನು ಕಿತ್ತುಹಾಕುವ ಮೂಲಕ ನರೇಂದ್ರ ಮೋದಿ ಸರ್ಕಾರ ಪ್ರತಿಭಟನಾಕಾರರ ವಿರುದ್ಧ ದಬ್ಬಾಳಿಕೆ ತೋರಿಸುತ್ತಿದೆ ಎಂದು ಆರೋಪಿಸಿದೆ.

ಇಂಟರ್ನೆಟ್ ಸೇರಿದಂತೆ ಮಾಹಿತಿಗಳು ಸಿಗುವಂತೆ ಮಾಡುವುದಕ್ಕೆ ತಡೆಯೊಡ್ಡುವುದು, ಮೂಲಭೂತ ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆಯನ್ನುಂಟುಮಾಡಿದಂತೆ ಆಗುತ್ತದೆಯಲ್ಲದೆ ಪ್ರಜಾಪ್ರಭುತ್ವದ ಪರಿಕಲ್ಪನೆಗೆ ವಿರುದ್ಧವಾಗುತ್ತದೆ ಎಂದು ಅಮೆರಿಕ ಸರ್ಕಾರ ಹೇಳಿದೆ. ರೈತರು ಮತ್ತು ಸರ್ಕಾರದ ಮಧ್ಯೆ ಮಾತುಕತೆ ನಡೆಸಿ ಶೀಘ್ರವೇ ಸಮಸ್ಯೆ ಬಗೆಹರಿಸಲು ಒತ್ತಾಯಿಸಿರುವ ಅಮೆರಿಕ, ಶಾಂತಿಯುತ ಪ್ರತಿಭಟನೆ ಪ್ರಜಾಪ್ರಭುತ್ವದ ಹೆಗ್ಗುರುತಾಗಿದೆ ಎಂದು ಹೇಳಿದೆ.

ಅದಕ್ಕೆ ಪ್ರತಿಕ್ರಿಯಿಸಿರುವ ವಿದೇಶಾಂಗ ಇಲಾಖೆ ವಕ್ತಾರ ಅನುರಾಗ್ ಶ್ರೀವಾಸ್ತವ್, ಹಿಂಸಾಚಾರ ಉಲ್ಬಣವಾಗದಂತೆ ಭದ್ರತೆ, ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿಯ ಎನ್ ಸಿಆರ್ ಪ್ರದೇಶದ ಕೆಲವು ಭಾಗಗಳಲ್ಲಿ ಇಂಟರ್ನೆಟ್ ಸಂಪರ್ಕವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಕೃಷಿ ಸುಧಾರಣೆಗೆ ಭಾರತ ತೆಗೆದುಕೊಂಡಿರುವ ಕ್ರಮಗಳನ್ನು ಅಮೆರಿಕ ಬೆಂಬಲಿಸಿದೆ ಎಂದು ಹೇಳಿದ್ದಾರೆ.

ಜನವರಿ 26 ರಂದು ಐತಿಹಾಸಿಕ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರ ಮತ್ತು ವಿಧ್ವಂಸಕ ಘಟನೆಗಳು ಭಾರತದಲ್ಲಿ ಇದೇ ರೀತಿಯ ಭಾವನೆಗಳನ್ನು ಮತ್ತು ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ, ಕಳೆದ ಜನವರಿ 6ರಂದು ಅಮೆರಿಕದ ವಾಷಿಂಗ್ಟನ್ ನ ಕ್ಯಾಪಿಟಲ್ ಹಿಲ್ ಬಳಿ ಕೂಡ ಇಂತಹದ್ದೇ ಘಟನೆ ನಡೆದಿತ್ತು, ಈ ಎರಡೂ ಘಟನೆಗಳು ಒಂದೇ ತರಹದ್ದಾಗಿದ್ದು, ಆಯಾ ದೇಶಗಳ ಕಾನೂನಿನ ಪ್ರಕಾರ ವಿಚಾರಣೆ ನಡೆಸಲಾಗುತ್ತದೆ ಎಂದು ಹೇಳಿದರು.

ರೈತರ ಹೋರಾಟದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದ ಸೆಲೆಬ್ರಿಟಿಗಳಾದ ಪಾಪ್ ಗಾಯಕಿ ರಿಹಾನ್ನ ಮತ್ತು ಪರಿಸರವಾದಿ ಗ್ರೆಟಾ ಥನ್ಬರ್ಗ್ ಅವರು ಪ್ರತಿಕ್ರಿಯೆ ನೀಡಿದ ನಂತರ ಅಮೆರಿಕ ಸರ್ಕಾರದಿಂದ ಈ ಪ್ರತಿಕ್ರಿಯೆ ಬಂದಿದೆ.

Stay up to date on all the latest ಅಂತಾರಾಷ್ಟ್ರೀಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp