ಮಾತುಕತೆ ಮೂಲಕ ಗಡಿ ವಿವಾದ ಇತ್ಯರ್ಥಕ್ಕೆ ಪಾಕಿಸ್ತಾನ ಸಿದ್ಧ: ಪಿಎಂ ಇಮ್ರಾನ್‌ ಖಾನ್‌

ಮಾತುಕತೆ ಮೂಲಕ ಗಡಿ ವಿವಾದ ಇತ್ಯರ್ಥಕ್ಕೆ ಪಾಕಿಸ್ತಾನ ಸಿದ್ಧ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

Published: 27th February 2021 06:14 PM  |   Last Updated: 27th February 2021 06:14 PM   |  A+A-


Imran Khan

ಇಮ್ರಾನ್ ಖಾನ್

Posted By : Srinivasamurthy VN
Source : PTI

ಇಸ್ಲಾಮಾಬಾದ್‌: ಮಾತುಕತೆ ಮೂಲಕ ಗಡಿ ವಿವಾದ ಇತ್ಯರ್ಥಕ್ಕೆ ಪಾಕಿಸ್ತಾನ ಸಿದ್ಧ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಇಮ್ರಾನ್ ಖಾನ್, 'ಭಾರತದ ಜತೆಗಿನ ಎಲ್ಲ ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಸಿದ್ಧ.. ಗಡಿ ನಿಯಂತ್ರಣ ರೇಖೆಯಲ್ಲಿ ಕದನವಿರಾಮ ಜಾರಿಗೊಳಿಸಿರುವುದನ್ನು ಸ್ವಾಗತಿಸುತ್ತೇನೆ. ಆದರೆ, ಉಭಯ ದೇಶಗಳ ನಡುವೆ ಮತ್ತಷ್ಟು ಸೌಹಾರ್ದಯುತ  ಕ್ರಮಗಳನ್ನು ಕೈಗೊಳ್ಳಲು ಪೂರಕ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಭಾರತದ ಮೇಲಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯದಂತೆ ಕಾಶ್ಮೀರ ಜನತೆಯ ಬೇಡಿಕೆಗಳು ಮತ್ತು ಹಕ್ಕುಗಳನ್ನು ಈಡೇರಿಸಲು ಭಾರತ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ನಾವು ಶಾಂತಿ ಕಾಪಾಡಲು ಬದ್ಧರಾಗಿದ್ದೇವೆ. ಬಾಕಿ ಉಳಿದಿರುವ ಎಲ್ಲ ವಿವಾದಗಳನ್ನು ಸಹ ಮಾತುಕತೆ ಮೂಲಕ ಇತ್ಯರ್ಥಗೊಳಿಸಲು ಸಿದ್ಧ. ಎಲ್‌ಒಸಿಯ ಉದ್ದಕ್ಕೂ ಕದನ ವಿರಾಮವನ್ನು ಮರುಸ್ಥಾಪಿಸುವುದನ್ನು ನಾನು ಸ್ವಾಗತಿಸುತ್ತೇನೆ. ಮುಂದಿನ ಪ್ರಗತಿಗೆ ಅನುವು ಮಾಡಿಕೊಡುವ ವಾತಾವರಣವನ್ನು ಸೃಷ್ಟಿಸುವ  ಜವಾಬ್ದಾರಿ ಭಾರತದ ಮೇಲಿದೆ. ಯುಎನ್‌ಎಸ್‌ಸಿ ನಿರ್ಣಯಗಳ ಪ್ರಕಾರ ಕಾಶ್ಮೀರಿ ಜನರ ಸ್ವ-ನಿರ್ಣಯದ ದೀರ್ಘಕಾಲದ ಬೇಡಿಕೆ ಮತ್ತು ಹಕ್ಕನ್ನು ಪೂರೈಸಲು ಭಾರತ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ನಾವು ಯಾವಾಗಲೂ ಶಾಂತಿ ಸ್ಫಾಪನೆಯತ್ತ ನಿಂತಿದ್ದೇವೆ ಮತ್ತು ಸಂಭಾಷಣೆಯ ಮೂಲಕ ಬಾಕಿ ಇರುವ  ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಮುಂದುವರಿಯಲು ಸಿದ್ಧರಾಗಿರುತ್ತೇವೆ ಎಂದು ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ.

ಗಡಿ ನಿಯಂತ್ರಣ ರೇಖೆ ಮತ್ತು ಇತರ ವಲಯಗಳಲ್ಲಿ ಕದನ ವಿರಾಮ ಒಪ್ಪಂದವನ್ನು ಕಡ್ಡಾಯವಾಗಿ ಜಾರಿಗೊಳಿಸುವುದಾಗಿ ಭಾರತ ಮತ್ತು ಪಾಕಿಸ್ತಾನ ಸೇನೆ ಗುರುವಾರ ಘೋಷಿಸಿದ ಬಳಿಕ ಇದೇ ಮೊದಲ ಬಾರಿಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.

Stay up to date on all the latest ಅಂತಾರಾಷ್ಟ್ರೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp